ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ 48 ವರ್ಷದ ವ್ಯಕ್ತಿಯೊಬ್ಬನನ್ನು ಕಲ್ಲಿಗೆ ಗ್ರಾಮದ ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪದ ಸರ್ವಿಸ್ ರಸ್ತೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಒಟ್ಟು 1.93 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತು ಹಾಗೂ ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ಪುದು ಗ್ರಾಮದ ಅಮ್ಮೆಮ್ಮಾರ್ ಮೂಲದ, ಪ್ರಸ್ತುತ ಫರಂಗಿಪೇಟೆಯ ಟಿ.ಕೆ. ಫ್ಲ್ಯಾಟ್‌ನಲ್ಲಿ ವಾಸಿಸುತ್ತಿರುವ ಅಶ್ರಫ್ ಅಲಿಯಾಸ್ ಮೊಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಅನಂತ ಪದ್ಮನಾಭ ಅವರ ನೇತೃತ್ವದ ಪೊಲೀಸ್ ತಂಡ ಸ್ಥಳದ ಮೇಲೆ ದಾಳಿ ನಡೆಸಿದೆ. ಪೊಲೀಸರನ್ನು ಕಂಡು ಅಶ್ರಫ್ ಪರಾರಿಯಾಗಲು ಯತ್ನಿಸಿದನಾದರೂ, ಆತನನ್ನು ವಶಕ್ಕೆ ಪಡೆದ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಆರೋಪಿಯ ಪ್ಯಾಂಟ್ ಜೇಬಿನಲ್ಲಿ ಬಿಳಿ ಬಣ್ಣದ ಪೌಡರ್ ಹೊಂದಿದ್ದ ನಾಲ್ಕು ಪ್ಯಾಕೆಟ್‌ಗಳು ಹಾಗೂ ಆತನ ಸ್ಕೂಟರ್ ಸೀಟ್‌ನಡಿಯಲ್ಲಿ ಐದು ಪ್ಯಾಕೆಟ್‌ಗಳು ಪತ್ತೆಯಾಗಿವೆ. ಪ್ರಾಥಮಿಕ ತನಿಖೆಯಲ್ಲಿ ಇದು ‘ಆಂಫಿಟಮೈನ್/ಮೆಥಾಂಫಿಟಮೈನ್’ ಮಾದರಿಯ ಮಾದಕ ದ್ರವ್ಯವಿರಬಹುದು ಎಂದು ಶಂಕಿಸಲಾಗಿದೆ.
ಸಂಶಯಾಸ್ಪದ ಮಾದಕ ವಸ್ತುವಿನ ಜೊತೆಗೆ ಆರೋಪಿಯಿಂದ ಎರಡು ಮೊಬೈಲ್ ಫೋನ್‌ಗಳು, 1,870 ರೂ. ನಗದು, ಡೆಬಿಟ್ ಕಾರ್ಡ್, ಎಂಟು ಖಾಲಿ ಜಿಪ್-ಲಾಕ್ ಕವರ್‌ಗಳು, ತೂಕದ ಯಂತ್ರ ಹಾಗೂ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯವನ್ನು ಸುಮಾರು 1.93 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಕಾಪು ಬೀಚ್‌ನಲ್ಲಿ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಇಬ್ಬರು ಹುಡುಗರ ಮೃತದೇಹ ಪತ್ತೆ.. ಉಡುಪಿ: ಕಾಪು ಬೀಚ್‌ನಲ್ಲಿ…
ಕಾಪುವಿನಲ್ಲಿ ನ.27ರಂದು ಬೃಹತ್ ಉಚಿತ ಉದ್ಯೋಗ ಮೇಳ ವಿದೇಶಿ ಕಂಪೆನಿ ಸೇರಿದಂತೆ ಹತ್ತಾರು ಸಂಸ್ಥೆಗಳ ಭಾಗಹಿಸುವಿಕೆ ಕಾಪು: ಯುವಜನತೆಗೆ ಉದ್ಯೋಗಾವಕಾಶ…
ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮೋದ್ ಮಧ್ವರಾಜ್ ನೇಮಕ ನವದೆಹಲಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪದಾಧಿಕಾರಿಗಳನ್ನು…
ನ. 24, 25 ರಂದು ಇತಿಹಾಸ ಪ್ರಸಿದ್ಧ ಕಾಪು ಮಾರಿಗುಡಿಗಳಲ್ಲಿ ಜಾರ್ದೆ ಮಾರಿಪೂಜೆ ಸಂಭ್ರಮ ಇತಿಹಾಸ ಪ್ರಸಿದ್ಧ ಕಾಪು ಹಳೆ…
ಸಂಬಂಧಿಕರನ್ನು ಬೀಳ್ಕೊಡಲು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರವೇಶಿಸಿದ 12 ಮಂದಿ ಸ್ವಯಂಚಾಲಿತ ಬಾಗಿಲುಗಳು ಮುಚ್ಚಿದ್ದರಿಂದ ರೈಲಿನೊಳಗೆ ಲಾಕ್ 140 ಕಿ.ಮೀ…
ಗ್ರಾಹಕರಿಗೆ ಗುಡ್ ನ್ಯೂಸ್: ಸೋನಾ ಮಸೂರಿ ಅಕ್ಕಿ ಬೆಲೆಯಲ್ಲಿ ಭಾರೀ ಇಳಿಕೆ, ಕೆಜಿಗೆ ₹20ರವರೆಗೆ ಕಡಿತ ಬೆಂಗಳೂರು: ಮಾರುಕಟ್ಟೆಯಲ್ಲಿ ಹೊಸ…