Featured

ಬಂಟ್ವಾಳ : ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ, ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ : ನಳಿನ್ – vishwanews24

ಬಂಟ್ವಾಳ : ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ, ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ : ನಳಿನ್

ಬಂಟ್ವಾಳ : ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭಾವುಕರಾದ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ.

ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಈ ವಿದ್ಯಮಾನ ನಡೆದಿದೆ. ರಾಜ್ಯಾಧ್ಯಕ್ಷರಾಗಿ ಅಭೂತಪೂರ್ವ ಸೇವೆ ಸಲ್ಲಿಸಿದ್ದ ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್‌ಗೆ ಬುಧವಾರ ಬಂಟ್ವಾಳದಲ್ಲಿ ಆಭಿನಂದನಾ ಸಮಾರಂಭವೊಂದನ್ನು ಆಯೋಜಿಸಲಾಗಿತ್ತು. ಹಲವಾರು ಬಾರಿ ಸಾಮಾಜಿಕ ಜಾಲತಾಣ, ವೇದಿಕೆಗಳಲ್ಲಿ, ಕಾರ್ಯಕರ್ತರ ಸಭೆಗಳಲ್ಲಿ ಆದ ಅಸಮಾಧಾನದ ಬಗ್ಗೆ ಮೊದಲ ಬಾರಿಗೆ ಕಟೀಲ್ ಪ್ರತಿಕ್ರೀಯಿಸಿದ್ದು,ನನ್ನ ವಿರುದ್ದದ ಹಲವು ಟೀಕೆ ,ಟಿಪ್ಪಣಿಯನ್ನ ಕೇಳಿದ್ದೇನೆ, ಹತ್ತಾರು ಬಾರಿ ನನಗಾದಂತಹ ಅಪಮಾನಗಳನ್ನ ಸಹಿಸಿಕೊಂಡಿದ್ದೇನೆ,ನಾನು ಬಿಜೆಪಿಯ ವಿಚಾರಧಾರೆ ಒಪ್ಪಿದ ಕಾರಣ ಎಷ್ಟೇ ಅಪಮಾನವಾದರೂ ಸಹಿಸಿಕೊಂಡಿದ್ದೇನೆ. ಮತ್ತು ನಿಮ್ಮ ಆಶಯಕ್ಕೆ ನಾನು ಕೈ ಮುಗಿಯುತ್ತೇನೆ. ಕಳೆದ ಸಮಯದಲ್ಲಿ ಹಲವು ನೋವನ್ನ ಅನುಭವಿಸಿದ್ದೇನೆ. ಮುಂದಿನ ಲೋಕಸಭಾ ಸದಸ್ಯ ಸ್ಥಾನ ನನಗೆ ಸಿಗಬೇಕೆಂದಿಲ್ಲ ಮತ್ತು ಅದರ ಆಸೆಯನ್ನು ನಾನು ಇಟ್ಕೊಂಡವನಲ್ಲ ಆದ್ರೆ ಲೋಕಸಭಾ ಅಭ್ಯರ್ಥಿ ಯಾರೇ ಆದರೂ ನನ್ನ ಬೆಂಬಲವಿದೆ.

ಸಂಸದನಾದ ಬಳಿಕ ಹಳ್ಳಿ ಹಳ್ಳಿಗಳಿಗೆ ಬರಲು ಆಗಲಿಲ್ಲಎಂಬ ಕಾರಣಕ್ಕೆ ನನಗೂ ದುಃಖವಿದೆ. ಕಟೀಲು ದೇವರ ಮುಂದೆ ಪ್ರಮಾಣ ಮಾಡಿ ಹೇಳುತ್ತೇನೆ ನಾನು ಯಾರಿಂದಲೂ ಹಣ ಪಡೆದುಕೊಂಡಿಲ್ಲ, ಅಧಿಕಾರಿ, ಕಾಂಟ್ರಾಕ್ಟ್ ದಾರರಿಂದ ಕೂಡ ನಾನು ಹಣ ಪಡೆದಿಲ್ಲ. ರಾಜ್ಯಾಧ್ಯಕ್ಷನ ನೆಲೆಯಲ್ಲಿ ಇಡೀ ರಾಜ್ಯದ ಜವಾಬ್ದಾರಿಯಿತ್ತು. ಪ್ರಾಮಾಣಿಕವಾಗಿ ಬಿಜೆಪಿಯನ್ನ ಹಳ್ಳಿ ಹಳ್ಳಿಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ ಹೊರತುನೀವು ತಲೆ ತಗ್ಗಿಸುವ ರೀತಿಯ ಯಾವುದೇ ಕೆಲಸ ಮಾಡಲಿಲ್ಲ. ಈಗ ಮತ್ತೆ ನಾನು ದಕ್ಷಿಣ ಕನ್ನಡ ಜಿಲ್ಲೆಯತ್ತ ಗಮನ ನೀಡುತ್ತೇನೆ ಮತ್ತು ನಿಮ್ಮ ಗೌರವಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತೇನೆ ಇನ್ನೂ ಉಳಿದಿರುವ 6 ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿಮ್ಮ ಗ್ರಾಮಕ್ಕೆ ಬರುತ್ತೇನೆಮತ್ತೆ ನಿಮ್ಮ ಆಶೀರ್ವಾದವನ್ನ ಕಾಲು ಮುಟ್ಟಿ ನಮಸ್ಕಾರ ಮಾಡುವ ಮೂಲಕ ಕೇಳುತ್ತೇನೆ ಎಂದು ಹೇಳುವಾಗ ಭಾವುಕರಾದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

19 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

20 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

20 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago