Featured

ಬಂಟ್ವಾಳ: ಮುಸುಕುಧಾರಿಗಳಿಂದ ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ : 7 ಮಂದಿ ಆರೋಪಿಗಳ ಬಂಧನ – vishwanews24

ಬಂಟ್ವಾಳ: ಮುಸುಕುಧಾರಿಗಳಿಂದ ತಾಯಿ ಮಗಳಿಗೆ ಚಾಕು ತೋರಿಸಿ ದರೋಡೆ ಪ್ರಕರಣ : 7 ಮಂದಿ ಆರೋಪಿಗಳ ಬಂಧನ

ಬಂಟ್ವಾಳ : ತಾಲೂಕಿನ ವಗ್ಗ ಸಮೀಪದ ಮೇನಾಡು ಎಂಬಲ್ಲಿ ಮುಸುಕುಧಾರಿಗಳ ತಂಡ ಮನೆಯೊಂದಕ್ಕೆ ನುಗ್ಗಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದರೋಡೆಗೈದ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣದ ಆರೋಪಿಗಳಾದ 7 ಜನರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಗಣೇಶ ನಾಯ್ಕ (26), ದಿನೇಶ್ ನಾಯ್ಕ (22), ಸಾಗರ ಶೆಟ್ಟಿ (21) ಮಂಗಳೂರು, ಐಕಳ ಗ್ರಾಮದ ರಾಕೇಶ್ ಎಲ್. ಪಿಂಟೋ (29), ಕಡಬ ಬೆಳಂದೂರು ಗ್ರಾಮದ ಎಂ.ಸೀತಾರಾಮ @ ಪ್ರವೀಣ್ (36), ಸುಧೀರ್ (29) ಹಾಗೂ ದರೋಡೆಗೈದ ಚಿನ್ನಾಭರಣವನ್ನು ಸ್ವೀಕರಿಸಿದ ಮೂಲತ: ಬಂಟ್ವಾಳ ತಾಲೂಕಿನ, ಇರಾ ಗ್ರಾಮದ ನಿವಾಸಿ ಪ್ರಸ್ತುತ ಚಿಕ್ಕಮಗಳೂರಿನ ಗೌರಿ ಕಾಲುವೆಯಲ್ಲಿ ವಾಸವಾಗಿದ್ದ ಮಹಮ್ಮದ್ ಹನೀಫ್ (49) ಎಂದು ಗುರುತಿಸಲಾಗಿದೆ.

ಇನ್ನು ಬಂಧಿತರಿಂದ ದರೋಡೆಗೈದ 3.15 ಲಕ್ಷ ಮೌಲ್ಯದ 54 ಗ್ರಾಂ ಚಿನ್ನಾಭರಣ ಹಾಗೂ ರೂ. 8 ಲಕ್ಷ ಮೌಲ್ಯದ ಇನ್ನೋವಾ ಕಾರು ಹಾಗು ಅಂದಾಜು ರೂ. 2 ಲಕ್ಷ ಮೌಲ್ಯದ ಟಾಟಾ ಇಂಡಿಕಾ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಜ.11 ರ ಗುರುವಾರದಂದು ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಅಂಚಿಕಟ್ಟೆ ಮೇನಾಡು ನಿವಾಸಿ ಮರೀಟಾ ಸಿಂಥಿಯಾ ಪಿಂಟೋ ಎಂಬವರ ಮನೆಗೆ ಬಂದ ಮುಸುಕುದಾರಿಗಳು ಮನೆಯ ಬೆಲ್ ಮಾಡಿದ್ದರೆ. ಈ ವೇಳೆ ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ ಹಾಗೂ ಮಗಳು ಮರಿಟಾ ಪಿಂಟೋ ಮಾತ್ರ ಇದ್ದು, ಬೆಳಿಗ್ಗೆ 6.15 ಗಂಟೆಗೆ ಬೆಲ್ ಹಾಕಿದಕ್ಕೆ ಮನೆಯ ಬಾಗಿಲು ತೆರದಿದ್ದಾರೆ. ಬಾಗಿಲು ತೆರೆದ ಕೂಡಲೇ ಮುಸುಕುದಾರಿಗಳು ಮನೆಯೊಳಗೆ ನುಗ್ಗಿ, ಚೂರಿ ತೋರಿಸಿ ಗೊದ್ರೇಜ್ ಕೀ ನೀಡುವಂತೆ ಹೆದರಿಸಿದ್ದಾರೆ, ನೀಡದಿದ್ದರೆ ಕೊಲ್ಲುವ ಬೆದರಿಕೆ ಹಾಕಿದ್ದರು.

ಬೆದರಿಕೆಗೆ ಒಳಗಾದ ಮರಿಟಾ ಪಿಂಟೋ ಕೀ ನೀಡಿದ್ದಾರೆ. ಕೀ ಪಡೆದುಕೊಂಡ ಮುಸುಕುದಾರಿಗಳು ಕಳ್ಳರು ಗೊದ್ರೇಜ್ ನಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿದ್ದಾರೆ. ಈ ಸಂದರ್ಭದಲ್ಲಿ ಮರಿಟಾ ಪಿಂಟೊ ಹಾಗೂ ಮುಸುಕುದಾರಿಗಳ ನಡುವೆ ಗಲಾಟೆ ನಡೆದಿದ್ದು, ಅವರ ಕೈಗೆ ಗಾಯವಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಮಂಗಳೂರು ಎಸ್.ಪಿ.ರಿಷ್ಯಂತ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣವನ್ನು ಪತ್ತೆ ಹಚ್ಚಲು ಮೂರು ವಿಶೇಷ ತಂಡವನ್ನು ರಚನೆ ಮಾಡಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago