ಬಂಟ್ವಾಳ : ಹೇಮಂತ್ ನಾಪತ್ತೆ ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಜುಲೈ 30ರಂದು ಕೂಡ ಶೋಧ ಕಾರ್ಯ ಮುಂದುವರಿದಿದೆ. ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದರು.
ಹೇಮಂತ್ ಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ , ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನದಿಯಲ್ಲಿ ಹಾಗೂ ಇತರ ಸ್ಥಳಗಳಲ್ಲಿ ಶೋಧ ನಡೆಸಿದೆ.
ತುಂಬೆ, ಸಜೀಪ, ಫರಂಗಿಪೇಟೆವರೆಗೆ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಆದರೆ ಜುಲೈ ೩೦ರಂದು ಕೂಡ ಹೇಮಂತ್ ನ ಸುಳಿವು ಸಿಕ್ಕಿಲ್ಲ ಎಂದು ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…