Featured

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಸಾವು – vishwanews24

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ; ವ್ಯಕ್ತಿ ಸಾವು

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ.

ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ.

ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ವೇಳೆ ಮೃತಪಟ್ಟ ಬಗ್ಗೆ ಪೋಲಿಸ್ ಇಲಾಖೆ ಮಾಹಿತಿ ನೀಡಿದೆ.

ರಿಕ್ಷಾದಲ್ಲಿ ಚಾಲಕನ ಪತ್ನಿ ಮಕ್ಕಳು ಹಾಗೂ ಮಾವ ಪ್ರಯಾಣಿಸುತ್ತಿದ್ದು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಲೋಕೇಶ್ ಅವರು ಸುಭಾಷ್ ನಗರದ ಶ್ರೀ ಶಾರದಾ ಪೂಜಾ ಮಹೋತ್ಸವ ಸಮಿತಿ ಸದಸ್ಯರಾಗಿದ್ದು,ಸಾಮಾಜಿಕವಾಗಿ ಹಾಗೂ ಧಾರ್ಮಿಕವಾಗಿ ಅನೇಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ ಹಾಗೂ ಎರಡು ಮಕ್ಕಳ ಸಹಿತ ಅನೇಕ ಬಂಧುಬಳಗವನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

15 minutes ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

53 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

59 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

1 hour ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

2 hours ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago