Featured

ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿ – ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು – vishwanews24

ಬಂಟ್ವಾಳ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿ – ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತ್ಯು

ಬಂಟ್ವಾಳ: ಪಾದಚಾರಿ ಯುವತಿಯೋರ್ವಳಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಳು ಮಧ್ಯರಾತ್ರಿ ವೇಳೆ ಮೃತಪಟ್ಟ ಘಟನೆ ನಡೆದಿದೆ.

ಬಿಸಿರೋಡಿನ ಕೈಕಂಬ ‌ಸಮೀಪದ ಪಚ್ಚಿನಡ್ಕ ಎಂಬಲ್ಲಿ ರಾತ್ರಿ 8 ಗಂಟೆ ವೇಳೆ ಅಪಘಾತ ನಡೆದಿತ್ತು. ಇಲ್ಲಿನ ಸ್ಥಳೀಯ ‌ನಿವಾಸಿ ಚೈತ್ರ (22 ) ಮೃತಪಟ್ಟ ಯುವತಿ.

ಮಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಚೈತ್ರ ಸಂಜೆ ಕೆಲಸ ಬಿಟ್ಟು ಬಸ್ ನಿಂದ ಇಳಿದು ತಾಯಿ ಜೊತೆಗೆ ಮನೆಯ ಕಡೆಯ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ ಎಂದು ಆರಂಭದಲ್ಲಿ ಹೇಳಲಾಗಿತ್ತು. ಸ್ನೇಹಿತೆಯೋರ್ವಳ ಮದುವೆಯ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿನ್ನಲೆಈಕೆ ಕೆಲಸಕ್ಕೆ ರಜೆ ಪಡೆದುಕೊಂಡು ಸಂಜೆ ವೇಳೆ ಮನೆಯಿಂದ ತಾಯಿ ಜೊತೆ ನಡೆದುಕೊಂಡು ಹೋಗುತ್ತಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.

ತಾಯಿ ಜೊತೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡಿಕೊಂಡು ಬಂದ ಸ್ವಿಫ್ಟ್ ಕಾರು ಚೈತ್ರಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಇವಳನ್ನು ಖಾಸಗಿ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಟ್ರಾಫಿಕ್ ಎ.ಎಸ್.ಐ.ಸುರೇಶ್ ಪಡಾರ್ ಹಾಗೂ ಹೆಚ್.ಸಿ.ರಮೇಶ್ ಖಾಸಗಿ ವಾಹನದ ಮೂಲಕ ಗಾಯಳುವನ್ನು ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಗಂಭೀರ ಗಾಯಗೊಂಡ ಈಕೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ಈಕೆ ಮೃತಪಟ್ಟ ಬಗ್ಗೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು ಬಳಿಕ ನಿಯಂತ್ರಣ ಕಳೆದುಕೊಂಡು ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಮನೆಯೊಂದರ ಕಾಂಪೌಂಡ್ ಗೆ ಕೂಡ ಗುದ್ದಿ ನಿಂತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಕಾರು ಚಾಲಕ ಹಾಗೂ ಆತನ ಜೊತೆಯಿದ್ದ ಮೂವರು ಸಹ ಪ್ರಯಾಣಿಕ ಪರಾರಿಯಾಗಿದ್ದು, ಮಲ್ಲೂರು ಕಡೆ ಹೋಗುವವರು ಎಂದು ಹೇಳಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ‌ಭೇಟಿಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮದುವೆಗೆ ನಿಶ್ಚಿತಾರ್ಥ ನಡೆದಿತ್ತು:

‌‌‌ಚೈತ್ರ ಖ್ಯಾತ ಮೇಕಪ್ ಆರ್ಟಿಸ್ಟ್ ದಿ. ಭಾಸ್ಕರ್ ಆಚಾರ್ಯ ಅವರ ಮಗಳು. ಈಕೆ ಮಂಗಳೂರಿನ‌ ಪ್ರಸಿದ್ದ ಬಟ್ಟೆ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ನಿನ್ನೆ ರಜಾ ಪಡೆದುಕೊಂಡಿದ್ದಳು.

ಇವಳ ಸ್ನೇಹಿತೆಯೋರ್ವಳ ರೋಸ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ತಾಯಿ ಜೊತೆ ಅವಳ ಮನೆಗೆ ಹೋಗುತ್ತಿದ್ದ ವೇಳೆ ಕಾರು ಇವಳಿಗೆ ಡಿಕ್ಕಿ ಹೊಡೆದಿದೆ.

ಚೈತ್ರಳಿಗೆ ನಿಶ್ಚಿತಾರ್ಥ ನಡೆದು ಮಾ.3 ರಂದು ಕೊಡ್ಯಡ್ಕದ ಯುವಕನ ಜೊತೆ ಮದುವೆ ನಿಗದಿಯಾಗಿತ್ತು. ಇದೀಗ ಮದುವೆಯಾಗಿ ಗಂಡನ ಮನೆಗೆ ಹೋಗಬೇಕಿದ್ದ ಯುವತಿಯನ್ನು ಕಾರೊಂದು ಮಸಣ ಸೇರುವಂತೆ ಮಾಡಿದೆ.

ಗಾಂಜಾ ಸೇವಸಿದ್ದರಾ?

ಗಾಂಜಾ ಸೇವನೆ ಮಾಡಿ ಕಾರು ಓಡಿಸುತ್ತಿದ್ದುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಸಂಬಂಧಿಕರು ದೂರು ನೀಡಿದ್ದು, ಪೋಲಿಸರು ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

20 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago