ಬಂಟ್ವಾಳ: ದೇಶದ ಕೋಟ್ಯಂತರ ಜನರ ಆಶೋತ್ತರವಾಗಿ ಜಾಗತಿಕ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲು ನಡೆಸಿದ ರುದ್ರಯಾಗ ಫಲಿಸುತ್ತದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಹೇಳಿದರು.
ಬಂಟ್ವಾಳ ತಾಲೂಕಿನ ಕಕ್ಕೆಪದವು ಎಂಬಲ್ಲಿ ಯಾಗ ನಡೆದಿದ್ದು ಸ್ಥಳೀಯ ಸಂಘಟನೆ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ಆಯೋಜನೆ ಮಾಡಲಾಗಿತ್ತು. ಶ್ರೀ ರಾಮಾಂಜನೇಯ ಭಜನಾ ಮಂದಿರದ 4ನೇ ವರ್ಷದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಸಂಕಲ್ಪದಡಿ ಬುಧವಾರ ನಡೆದ ರುದ್ರಯಾಗದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾಗದ ಪೂರ್ಣಾಹುತಿ ಕಾರ್ಯ ನಿಗದಿಯಾಗಿತ್ತು. ಆದರೆ ಕೊನೆಕ್ಷಣದಲ್ಲಿ ಬಿಎಸ್ವೈ ಗೈರಾಗಿದ್ದರಿಂದ ಸಂಸದ ನಳಿನ್ ಕುಮಾರ್ ಯಾಗದ ಪೂರ್ಣಾಹುತಿ ನೆರವೇರಿಸಿದ್ದಾರೆ. ದೇಶಕ್ಕಾಗಿ ತನ್ನ ಜೀವನವನ್ನು ಮುಡಿಪಾಗಿರಿಸಿದ ನರೇಂದ್ರ ಮೋದಿ ಅವರು ಮುಂದಕ್ಕೂ ಪ್ರಧಾನಿಯಾಗುವಂತೆ ಕೈ ಜೋಡಿಸಬೇಕು ಎಂದರು.
ಬಲಿಷ್ಠ ಭಾರತ ನಿರ್ಮಿಸಲು ಶ್ರೀರಾಮಾಂಜನೇಯ ದೇವರ, ಶ್ರೀ ಕಾರಿಂಜೇಶ್ವರ ದೇವರ ಮತ್ತು ಮೈರ ಶ್ರೀ ಮಹಾಕಾಳಿ ಅಮ್ಮನವರ ಅನುಗ್ರಹ ಪ್ರಧಾನಿಗೆ ಇರಲೆಂಬ ಆಶಯದಲ್ಲಿ ಎಲ್ಲರೂ ಒಟ್ಟಾಗಿ ಈ ಯಾಗ ನೆರವೇರಿಸಲಾಗಿದೆ ಎಂದು ಗೆಳೆಯರ ಬಳಗದ ಮಾಜಿ ಅಧ್ಯಕ್ಷ ರಂಜಿತ್ ಮೈರ ತಿಳಿಸಿದ್ದಾರೆ.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…