ಬಂಟ್ವಾಳ: ಕನ್ಯಾನದ ಗ್ರಾಮದ ಕಣಿಯೂರು ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ತಿರುವು ದೊರಕಿದ್ದು , ಅನ್ಯಕೋಮಿನ ಯುವಕ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಬಾಲಕಿ ಕೃತ್ಯ ಎಸಗಿದ್ದು, ಹೀಗಾಗಿ ಯುವಕನ ಯುವಕನೋರ್ವನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೂಲತಃ ಸುಳ್ಯ ತಾಲೂಕಿನ ಪಂಜ ನಿವಾಸಿ ಸಂಜೀವ ಎಂಬವರ ಪುತ್ರಿ ಆತ್ಮೀಕಾ (14) ಎಂಬಾಕೆ ಕಣಿಯೂರು ಎಂಬಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು . ಕನ್ಯಾನ ಗ್ರಾಮದ ಹಮೀದ್(30) ಆತ್ಮಹತ್ಯೆಗೆ ಕಾರಣ ಎಂದು ಅವನ ಮೇಲೆ ಸಂಜೀವ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕನ್ಯಾನ ಗ್ರಾಮದ ಕಣಿಯೂರಿನಲ್ಲಿ ಮಸೀದಿ ಹಿಂಬಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸಂಜೀವ ಅವರ ಕುಟುಂಬ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಎಂದಿನಂತೆ ದಂಪತಿಗಳು ಕೂಲಿ ಕೆಲಸಕ್ಕೆ ತೆರಳಿದ್ದು, ಪುತ್ರ ಔಷಧಿ ತರಲೆಂದು ತೆರಳಿದ್ದು ಪುತ್ರಿ ಮಾತ್ರ ಮನೆಯಲ್ಲಿದ್ದಳು. ತಾಯಿ ಬೇಗ ಕೆಲಸ ಮುಗಿಸಿ 11.15 ರ ವೇಳೆಗೆ ಮನೆಗೆ ಮರಳಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಆತ್ಮೀಕಾ ಕಣಿಯೂರು ತಲೆಕ್ಕಿ ನಿವಾಸಿಯಾದ ಸಾಹುಲ್ ಹಮೀದ್ ಯಾನೆ ಕುಟ್ಟ ದೀರ್ಘ ಕಾಲ ಮೊಬೈಲ್ ನಲ್ಲಿ ಮಾತನಾಡುತ್ತಿದ್ದು ಇದನ್ನು ತಿಳಿದು ತಂದೆ ಮಗಳ ಮೊಬೈಲ್ ನ್ನು ತೆಗೆದಿರಿಸಿ ಆಕೆಗೆ ಬುದ್ಧಿವಾದ ಹೇಳಿದ್ದರು. ಸಾಹುಲ್ ಹಮೀದ್ ಹಾಗೂ ಆತನ ಅಣ್ಣನನ್ನು ಈ ವಿಚಾರಕ್ಕೆ ಸಂಬಂಧಪಟ್ಟಂತೆ ಕರೆದು ಆತನಿಗೆ ಮಗಳ ಸಹವಾಸಕ್ಕೆ ಬರಬೇಡ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಸಾಹುಲ್ ಹಮೀದ್ ಪದೇ ಪದೇ ಯಾರೂ ಇಲ್ಲದ ಸಮಯ ಆಕೆಯ ಮನೆಗೆ ಬಂದು ಆಕೆಯನ್ನು ಭೇಟಿಯಾಗಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನೀನು ನಿನ್ನ ತಂದೆ – ತಾಯಿಯನ್ನು ಬಿಟ್ಟು ನನ್ನೊಂದಿಗೆ ಬಾ. ನೀನು ಬರುವುದಿಲ್ಲವಾದರೆ ಸಾಯಿ ಎಂದು ಸಾಹುಲ್ ಹಮೀದ ಯಾನೆ ಕುಟ್ಟ ಹೇಳಿರುವುದನ್ನು ಮಗಳು ಆತ್ಮಿಕ ತಂದೆ ಹಾಗೂ ತಾಯಿ ಬಳಿ ಹೇಳಿಕೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದವರೆಂದು ತಿಳಿದಿದ್ದರೂ, ಬಾಲಕಿಯ ಮನಸ್ಸು ಕೆಡಿಸಿ ಪ್ರೀತಿಸುವಂತೆ ಒತ್ತಾಯ ಮಾಡಿದ್ದರಿಂದ ಮನನೊಂದು ಈ ಕೃತ್ಯ ಎಸೆಗಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…