ಬಂಟ್ವಾಳ : ಸಜೀಪನಡು ಗ್ರಾಮದ ದೇರಾಜೆಯ ದೀಕ್ಷಿತ್ ಅವರ ಮನೆಗೆ ವಿದ್ಯುತ್ ದುರಸ್ತಿಯವನ ಸೋಗಿನಲ್ಲಿ ನುಗ್ಗಿದ ಕಳ್ಳನೋರ್ವ 42 ಸಾವಿರ ರೂ. ಮೌಲ್ಯದ 7 ಗ್ರಾಂ ಚಿನ್ನಾಭರಣ ಹಾಗೂ 6 ಸಾವಿರ ರೂ. ನಗದನ್ನು ಕಳವು ಮಾಡಿದ ಘಟನೆ ನಡೆದಿದೆ.
ಮನೆಯಲ್ಲಿ ಸರೋಜಿನಿ ಎನ್ನುವ ಮಹಿಳೆಯನ್ನು ನಿಲ್ಲಿಸಿ ಮನೆಮಂದಿ ಪಾಣೆಮಂಗಳೂರಿನಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಮಧ್ಯಾಹ್ನ 2-3 ರ ಮಧ್ಯೆ ಅಪರಿಚಿತ ವ್ಯಕ್ತಿಯೋರ್ವ ಆಗಮಿಸಿ ದೀಚು (ದೀಕ್ಷಿತ್) ಅವರು ಮನೆಯ ವಿದ್ಯುತ್ ವಯರ್ ಹಾಗೂ ಲೈಟ್ ದುರಸ್ತಿ ಮಾಡಲು ತಿಳಿಸಿದ್ದಾರೆಂದು ಹೇಳಿದನು. ಸತ್ಯವೆಂದು ನಂಬಿದ ಸರೋಜಿನಿ ಆತನನ್ನು ಒಳಗೆ ಬಿಟ್ಟಿದ್ದರು.
ಆತ ದುರಸ್ತಿಯ ನಾಟಕ ಮಾಡಿ ಮಲಗುವ ಕೋಣೆಯ ಮಂಚದ ಕೆಳಭಾಗದಲ್ಲಿ ಬ್ಯಾಗ್‌ನಲ್ಲಿದ್ದ ಚಿನ್ನ ಹಾಗೂ ನಗದನ್ನು ಕಳವು ಮಾಡಿದ್ದಾನೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…