Featured

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ಬಾಲಕ ಸಾವು – vishwanews24

ಬಂಟ್ವಾಳ : ಶಬರಿಮಲೆ ಯಾತ್ರೆ ಮುಗಿಸಿ ವಾಪಸ್ ಆಗುವ ವೇಳೆ ಅಪಘಾತ, ನಿಂತಿದ್ದ ಕಾರಿಗೆ ಹಿಂದಿನಿಂದ ಡಿಕ್ಕಿಯಾದ ಲಾರಿ – ವೃತದಾರಿ ಬಾಲಕ ಸಾವು

ಬಂಟ್ವಾಳ: ಶಬರಿಮಲೆ ಯಾತ್ರೆ ಕೈಗೊಂಡು ದೇವರ ದರ್ಶನ ಮುಗಿಸಿ ವಾಪಸ್ ಮನೆಗೆ ಬರುವ ವೇಳೆ ಲಾರಿ ಡಿಕ್ಕಿಯಾಗಿ ಬಂಟ್ವಾಳದ ವೃತದಾರಿ ಬಾಲಕನೋರ್ವ ಮೃತಪಟ್ಟ ಘಟನೆ ಕೇರಳ ರಾಜ್ಯದ ಕ್ಯಾಲಿಕಟ್ ಸಮೀಪದ ಕೋಟೆಕಲ್ ಎಂಬಲ್ಲಿ ಜ.9ರ ಶುಕ್ರವಾರ ತಡರಾತ್ರಿ ವೇಳೆ ನಡೆದಿದೆ.

ಕುರಿಯಾಳ ಗ್ರಾಮದ ದುರ್ಗಾನಗರ ಸಮೀಪದ ಕೊಪ್ಪಳ ನಿವಾಸಿ ಅಶೋಕ್ ಪೂಜಾರಿ ಅವರ ಪುತ್ರ ಲಕ್ಷ್ಮೀಶ ಪೂಜಾರಿ (15) ಲಾರಿ ಅಪಘಾತದಲ್ಲಿ ಮೃತಪಟ್ಟ ಬಾಲಕ.

ಇನ್ನು ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದುರ್ಗಾನಗರ ನಿವಾಸಿಗಳಾದ ಅಶೋಕ್ ಪೂಜಾರಿ, ಸಂತೋಷ್ ಪೂಜಾರಿ, ಸಚಿನ್, ಗೋಪಾಲ ಪೂಜಾರಿ, ಲಕ್ಷ್ಮೀಶ ಪೂಜಾರಿ, ಕಿರಣ್, ವರದ್ ರಾಜ್ ಇನ್ನೋವಾ ಕಾರಿನಲ್ಲಿ ಒಟ್ಟು 7 ಮಂದಿ ಕುರಿಯಾಳದಿಂದ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೆಗೆ ತೆರಳಿದ್ದರು.

ಸಿದ್ದಕಟ್ಟೆಯ ಶಾಲೆಯ 9 ನೇ ತರಗತಿಯ ಬಾಲಕ ಲಕ್ಷ್ಮೀಶ, ಆತನ ತಂದೆ ಅಶೋಕ್ ಪೂಜಾರಿ ಜೊತೆ ಶಬರಿಮಲೆಗೆ ಜ.7 ರಂದು ಇನ್ನೋವಾ ಕಾರಿನಲ್ಲಿ ತೆರಳಿದ್ದರು. ಒಟ್ಟು 9 ಮಂದಿ ಕಾರಿನಲ್ಲಿ ತೆರಳಿದ್ದು, ದೇವರ ದರ್ಶನ ಮುಗಿಸಿ ಜ.9 ರಂದು ವಾಪಸ್ ಬರುತ್ತಿದ್ದ ವೇಳೆ ಕೊಟೆಕಲ್ ಎಂಬಲ್ಲಿ ಇವರ ಕಾರು ಕೆಟ್ಟುಹೋಗಿತ್ತು.

ಈ ಕಾರಣಕ್ಕಾಗಿ ಅಶೋಕ್ ಪೂಜಾರಿ ಒಬ್ಬರು ಕಾರಿನೊಳಗೆ ಕುಳಿತುಕೊಂಡಿದ್ದು, ಉಳಿದಂತೆ ಚಾಲಕ ಸೇರಿ 7 ಮಂದಿ ಕೂಡ ಕಾರಿನ ಎದುರು ಬೊನೆಟ್ ಓಪನ್ ಮಾಡಿ ಕಾರು ರಿಪೇರಿಯಲ್ಲಿ ತೊಡಗಿದ್ದರು. ಸುಮಾರು 2 ಗಂಟೆ ವೇಳೆಗೆ ಯಮ ಸ್ವರೂಪಿ ಲಾರಿಯೊಂದು ರಸ್ತೆ ಬದಿಯಲ್ಲಿ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಎಲ್ಲರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಅದೇ ಯಮ ಸ್ವರೂಪಿ ಲಾರಿಯ ಅಡಿಗೆ ಬಾಲಕ ಲಕ್ಷ್ಮೀಶ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಉಳಿದಂತೆ ವರದರಾಜ್ ಎಂಬವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೆ, ಕಾರಿನ ಎದುರಿದ್ದ ಎಲ್ಲರು ಸಣ್ಣಪುಟ್ಟ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago