Featured

ಬಂಟ್ವಾಳ: ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಕಲ್ಲು ಗಣಿಗಾರಿಕೆ ಸ್ಥಗಿತ : ವಿ. ಸುನೀಲ್ ಕುಮಾರ್ – Vishwanews24

ಬಂಟ್ವಾಳ: ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಕಲ್ಲು ಗಣಿಗಾರಿಕೆ ಸ್ಥಗಿತ : ವಿ. ಸುನೀಲ್ ಕುಮಾರ್ – Vishwanews24

ಬಂಟ್ವಾಳ: ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸು ಅಂದರೆ ಕಾವಳಮೂಡೂರು ಗ್ರಾಮ ಮತ್ತು ಕಾವಳ ಪಡೂರು ಗ್ರಾಮಗಳಲ್ಲಿ 03 ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು ಸ್ಥಳೀಯರ ಹಾಗೂ ದೇವಸ್ಥಾನದ ಭಕ್ತಾಧಿಗಳ ದೂರಿನ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ನಡೆಯುತ್ತಿದ್ದ 03 ಕಪ್ಪು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಕಾವಳ ಮೂಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕ್ರೆ ಮತ್ತು 172/2ಪಿ1 ರಲ್ಲಿ 0.50 ಎಕ್ರೆ ಒಟ್ಟು 1.00 ಎಕ್ರೆ ಪ್ರದೇಶದಲ್ಲಿ 2007 ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ ರೂ. 8,12,87,198 ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಸದ್ರಿ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ ಹಾಗೂ ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲಿಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.

ಕಾವಳ ಪಡೂರು ಗ್ರಾಮದ ಸ.ನಂ 121/2ಪಿ1 ರಲ್ಲಿ 1.00 ಎಕ್ರೆ ವಿಸ್ತೀರ್ಣದಲ್ಲಿ 2016 ರಿಂದ ಆರಂಭಗೊAಡಿದ್ದ ಗಣಿಗಾರಿಕೆ 20 ವರ್ಷಗಳ ಅವಧಿಗೆ ಪರವಾನಿಗೆ ಇದ್ದರೂ ಕೂಡ ಗುತ್ತಿಗೆದಾರರು ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸದ್ರಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಹಾಗೂ ಸ.ನಂ 122/3ಪಿ1 ರಲ್ಲಿ 1.00 ಎಕ್ರೆ ಜಮೀನಿನಲ್ಲಿ 2015 ರಿಂದ ಆರಂಭಗೊAಡಿದ್ದ ಗಣಿಗಾರಿಕೆಯನ್ನು ಅದರ ಗುತ್ತಿಗೆದಾರರು ಮೃತಪಟ್ಟಿದ್ದು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಗಣಿಗಾರಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.

ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ 03 ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು ಸಾವಿರಾರು ವರ್ಷಗಳ ಇತಿಹಾಸವಿರುವ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಭಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.

ದೇವಸ್ಥಾನದ ಪರಿಸರವನ್ನು ಅತೀ ಸೂಕ್ಷö್ಮ ವಲಯ ಎಂದು ಘೋಷಣೆ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾಧಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ವಿ ಸುನಿಲ್ ಕುಮಾರ್ ಅವರು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago