Featured

ಬಂಟ್ವಾಳ : ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ : ಸಚಿವ ಸುನಿಲ್ ಕುಮಾರ್ – Vishwanews24

ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡಲ್ಲ

ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದ..

ಬಂಟ್ವಾಳ: ಹಿಂಸೆಯ ಮುಖಾಂತರವೇ ವ್ಯವಸ್ಥೆಯನ್ನು ಬುಡಮೇಲು ಗೊಳಿಸುವ ಪಿ.ಎಫ್.ಐ ಸಂಘಟನೆಯನ್ನು ಹತ್ತಿಕ್ಕಲು ಬಿಜೆಪಿ ಸರಕಾರ ಬದ್ದವಾಗಿದ್ದು, ಈ ಕುರಿತು ಕಾರ್ಯಚರಣೆ ನಡೆಸುತ್ತಿರುವ ಪೊಲೀಸ್ ಕಾರ್ಯ ಶ್ಲಾಘನೀಯ, ಅವರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಬಿಸಿರೋಡಿನಲ್ಲಿ ಮಾಧ್ಯಮ ದವರ ಜೊತೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಸಮಾಜ ಘಾತುಕ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ‌ ಇಲ್ಲದಿರುವವರ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ‌ಕೈಗೊಳ್ಳುತ್ತಿದೆ. ಕಾಂಗ್ರೇಸ್ ಅಧಿಕಾರವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಹಾಗೂ ಇತ್ತೀಚೆಗೆ ಶಿವಮೊಗ್ಗ ಹಾಗೂ ‌ಪುತ್ತೂರುನಲ್ಲಿ ನಡೆದಿದ್ದ ಕೊಲೆ ಕೃತ್ಯದಲ್ಲಿ ಪಿಎಫ್ ಐ ಸಂಘಟನೆಯ ಕೈವಾಡ ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ, ಹೀಗಾಗಿ ಅವರ ವಿರುದ್ಧ ಎನ್ ಐಎ ಹಾಗೂ ಪೊಲೀಸರು ಕ್ರಮ‌ಕೈಗೊಂಡಿದ್ದಾರೆ.

ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ, ಸಿದ್ಧರಾಮಯ್ಯ ವಿಜೃಂಭಿಸಲು ಅವಕಾಶ ಕೊಟ್ಟಿದ್ದರು. ಶಂಕಿತ ಉಗ್ರನಿಂದ ಬಂಟ್ವಾಳದಲ್ಲಿ ಬಾಂಬ್ ರಿಹರ್ಸಲ್‌ ನಡೆದಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅಂತರ್ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಿರುವ ಇಂತಹಾ ಕೃತ್ಯಗಳನ್ನು ಎಎನ್‌ಐ ಹಾಗೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದರು. ಬಿಜೆಪಿ‌ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ, ಹಿಂದುಳಿದ‌ ವರ್ಗಗಳ ಮೋರ್ಚಾದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಉಪಸ್ಥಿತರಿದ್ದರು.

ಮಂಗಳೂರು: ಕೋಟಿ ಕೋಟಿ ಲೂಟಿ ನಡೆಯುತ್ತಿದ್ದರೂ ಬಿಜೆಪಿ ಮುಖಂಡರ ಮೇಲೆ ಇಡಿ, ಸಿಬಿಐ, ಐಟಿ ದಾಳಿ ಯಾಕಿಲ್ಲ: ಎಂ.ಬಿ ಪಾಟೀಲ್‌ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

9 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

9 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago