ಬಂಟ್ವಾಳ: ಬಂಟ್ವಾಳ: ಸಾರ್ವಜನಿಕ ಹಿತದೃಷ್ಟಿಯಿಂದ ಸಸಿಕಾಂತ್ ಸೆಂಥಿಲ್ ರನ್ನುಬಂಧಿಸಿ, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ ಎಂದು ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಗಳೆರಡರಲ್ಲು ಭಾರತ ಸರಕಾರವು ಮಂಡಿಸಿದ ಪೌರತ್ವ ತಿದ್ದುಪಡಿ ಕಾಯ್ದೆ ಬಿಲ್ ಅನುಮೋದನೆಯಾಗಿದ್ದು, ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಈ ಕಾಯಿದೆಯ ವಿರುದ್ದ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಟಿಸುವ ಹೇಳಿಕೆ ನೀಡಿ ಸಮಾಜವನ್ನು ಛಿದ್ರಗೊಳಿಸುವ ಹುನ್ನಾರ ನಡೆಸುತ್ತಿರುವ ಹಿನ್ನಲೆಯಲ್ಲಿ ಅವರ ಮೇಲೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡುವಂತೆ ಬಂಟ್ವಾಳ ತಾಪಂ ಸದಸ್ಯ ಪ್ರಭಾಕರ ಪ್ರಭು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಸಿ.ಎ.ಎ. ವಿರುದ್ದ ಪ್ರತಿಭಟನೆ ಸಂಬಂಧಿಸಿದ ಸಾರ್ವಜನಿಕ ಸಭೆಗಳಲ್ಲಿ ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳ ಮುಗ್ಧ ಜನರನ್ನು ದಿಕ್ಕು ತಪ್ಪಿಸುವ, ಕಲಹಕ್ಕೆ ಪ್ರಚೋದನೆ ನೀಡುವಂತಹ ಭಾಷಣದ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಠಿಸಲು ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಯತ್ನಿಸುತ್ತಿದ್ದಾರೆ. ತಾನೊಬ್ಬ ಸ್ವಯಂ ನಿವೃತ್ತ ಐ.ಎ.ಎಸ್. ಅಧಿಕಾರಿ, ತಾನೇ ಇಡೀ ರಾಷ್ಟ್ರದ ಅತೀ ಬುದ್ದಿವಂತರಲ್ಲಿ ಓರ್ವ ಶ್ರೇಷ್ಟ ವ್ಯಕ್ತಿ ಎಂಬಂತೆ ವರ್ತಿಸುತ್ತಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಪರಿಸ್ಥಿತಿ ಹುಟ್ಟುಹಾಕಿದೆ ಎಂದು ಪ್ರಭು ಮನವಿಯಲ್ಲಿ ಆರೋಪಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ದ ಮಂಗಳೂರಿನಲ್ಲಿ ಈಚೆಗೆ ನಡೆಸಿದ ಪ್ರತಿಭಟನಾಕಾರರ ರಂಪಾಟ ಗಂಭೀರ ಸ್ವರೂಪ ಪಡೆದುಕೊಂಡಾಗ ಪೊಲೀಸರು ನಡೆಸಿದ ಅಶ್ರುವಾಯು, ಗೋಲಿಬಾರ್ ಕ್ರಮ ತಪ್ಪು ಹಾಗೂ ಪ್ರತಿಭಟನಾಕಾರರನ್ನು ಕಂಟ್ರೋಲ್ ಮಾಡದ ಪೋಲೀಸ್ ಏಕೆ ಬೇಕು? ಎಂದು ಅವರು ಪ್ರಶ್ನಿಸಿರುವುದು ಇಡೀ ಪೋಲೀಸ್ ಇಲಾಖೆಯನ್ನು ನಿಂದಿಸುವಂತಾಗಿದ್ದು ತಾನೊಬ್ಬ ಹಿಂದಿನ ಜಿಲ್ಲಾಧಿಕಾರಿ ಎಂಬುದನ್ನು ಮರೆತಂತಾಗಿದೆ ಎಂದು ಪ್ರಭು ದೂರಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮಂಗಳೂರಿನಿಂದ ಟಿಕೆಟ್ ಗಿಟ್ಟಿಸಿಕೊಳ್ಳಲು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಸಿಎಎ ವಿರುದ್ದ ಪ್ರತಿಭಟನೆ ಸಂದರ್ಭ ನಡೆದ ಗೋಲಿಬಾರ್ ಗೆ ಕರ್ನಾಟಕ ರಾಜ್ಯ ಸರಕಾರ ನೇರ ಹೊಣೆ. ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ದ ಸೆಂಥಿಲ್ ಟೀಕೆ ಮಾಡುತ್ತಿರುವುದು ರಾಷ್ಟ್ರ ದ್ರೋಹ ಎಂದೆನಿಸಿದೆ ಎಂದು ಮನವಿಯಲ್ಲಿ ಅಪಾದಿಸಿದ್ದಾರೆ.
ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ನಿವೃತ್ತ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ರವರನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಬಂಧಿಸಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಮತ್ತು ಇವರ ಪೂರ್ವ ಪರ ಸಮಗ್ರವಾದ ಆಂತರಿಕ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರಭು ಪತ್ರದಲ್ಲಿ ಕೋರಿದ್ದಾರೆ. ಮನವಿಯ ಪ್ರತಿಯನ್ನು ಕರ್ನಾಟಕ ಸರಕಾರದ ಗೃಹಸಚಿವರು, ಪೊಲೀಸ್ ಮಹಾ ನಿರ್ದೇಶಕರು ಕರ್ನಾಟಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದ.ಕ.ಮತ್ತು ಬಂಟ್ವಾಳ ವೃತ ನಿರೀಕ್ಷಕರಿಗೂ ರವಾನಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…