Featured

ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ  ಪಾರು – vishwanews24

ಬಂಟ್ವಾಳ :ಸಿಡಿಲು ಬಡಿದು ಮನೆಗೆ ಹಾನಿ; ಅದೃಷ್ಟವಶಾತ್ ಮನೆಮಂದಿ  ಪಾರು

ಬಂಟ್ವಾಳ : ಮನೆಯೊಂದಕ್ಕೆ ಸಿಡಿಲು ಬಡಿದು ಹಾನಿಯುಂಟಾಗಿದ್ದು, ಮನೆ ಮಂದಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಬಂಟ್ವಾಳದ ಕೇಪು ಗ್ರಾಮದ ಚೆಲ್ಲಡ್ಕ ಎಂಬಲ್ಲಿ ಜು.19ರ ತಡರಾತ್ರಿ ನಡೆದಿದೆ.

ಚೆಲ್ಲಡ್ಕ ಶಶಿಶೇಖರ ಭಂಡಾರಿ ಎಂಬವರ ಮನೆಗೆ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ. ಘಟನೆಯಿಂದಾಗಿ ಮನೆಯೊಳಗಿದ್ದ ಫ್ರಿಡ್ಜ್, ಗ್ರೈಂಡರ್, ಇಲೆಕ್ಟ್ರಾನಿಕ್ ಉಪಕರಣಗಳಿಗೆ ಹಾನಿಯಾಗಿದೆ. ಸಿಡಿಲು ಬಡಿದ ಪರಿಣಾಮ ಎಲೆಕ್ಟ್ರಾನಿಕ್ಸ್ ಉಪಕರಣಗಳಲ್ಲಿ ಬೆಂಕಿ ಉಂಟಾದ ಹಿನ್ನೆಲೆಯಲ್ಲಿ ಮನೆಯ ಒಂದು ಭಾಗ ಬೆಂಕಿಗಾಹುತಿಯಾಗಿದೆ.

ಸ್ಥಳೀಯ ಯುವಕರು ಬೆಂಕಿ ನಂದಿಸಲು ಪ್ರಯತ್ನಿಸಿದರು. ಆದರೆ ಬೆಂಕಿ ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಗಿದ್ದು ಅವರು ಸ್ಥಳಕಾಗಮಿಸಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

ಘಟನೆ ನಡೆಯುವ ವೇಳೆ ಮನೆಯೊಳಗಿದ್ದ ಶಶಿಶೇಖರ ಭಂಡಾರಿ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೇಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲದಾಸ್ ಭಕ್ತ, ಪಂಚಾಯತ್ ಅಧ್ಯಕ್ಷರಾದ ರಾಘವ ಸಾರಡ್ಕ, ಪಂಚಾಯತ್ ಸದಸ್ಯರಾದ ಜಗಜೀವನ್ ರಾಮ್ ಶೆಟ್ಟಿ ಮೈರ, ಪುರುಷೋತ್ತಮ ಕಲ್ಲಂಗಳ, ಬಿಜೆಪಿ ಮುಖಂಡರಾದ ರಾಜೀವ ಭಂಡಾರಿ ಕುಂಡಕೋಳಿ, ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ವಿಎ ಕಚೇರಿ ಸಿಬ್ಬಂದಿ ಗಣೇಶ್ ಪ್ರಭು ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

24 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago