ಬಂಟ್ವಾಳ : ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಗಾಯಗೊಂಡಿದ್ದ ಪ್ರಯಾಣಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಮಂಗಳೂರು ಮೂಲದ ವಿಕಾಸ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿದ್ದ ಇತರ ಎಂಟು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿಗಳ ಪ್ರಕಾರ, ಮಂಗಳೂರಿನಿಂದ ಒಂದು ಗುಂಪು ಸೀಮಂತ ಕಾರ್ಯಕ್ರಮದಲ್ಲಿ ಭಾಗವಹಿಸಲು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿಗೆ ತೆರಳಿತ್ತು. ಕಾರ್ಯಕ್ರಮ ಮುಗಿಸಿ ವಾಪಸ್ ಮಂಗಳೂರಿಗೆ ಬರುತ್ತಿದ್ದಾಗ, ಬಂಟ್ವಾಳದ ಪುದು ಗ್ರಾಮದ 10ನೇ ಮೈಲು ಕಲ್ಲು ಸಮೀಪದ ಮಂಗಳೂರು-ಬೆ0ಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್, ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಸ್‌ನಲ್ಲಿದ್ದ ಸುಮಾರು ಒಂಬತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಕಾಸ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…