ಬಂಟ್ವಾಳ: ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿನ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ನಕಲಿ ದಾಖಲಾತಿಗಳನ್ನು ನೀಡಿ ಸಾಲ ಪಡೆದು, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಬಶೀರ್ ಯಾನೆ ಹಸನ್ ಬಶೀರ್ (42) ಬಂಧಿತ ಆರೋಪಿ.
ಈತ ಕರ್ವಾನ್ ಅಟೋಮೊಬೈಲ್ಸ್‌ನ ವಿವಿಧ ಕಂಪೆನಿಯ ಕಾರು ಮಾರಾಟಗಾರರು ಎಂಬ ಹೆಸರಿನಲ್ಲಿ ನಕಲಿ ಸಂಸ್ಥೆ ಮಾಡಿಕೊಂಡಿದ್ದು, ಇದೇ ಹೆಸರಿನಲ್ಲಿ ನಕಲಿ ದಾಖಲಾತಿ ನೀಡಿ ಫರಂಗಿಪೇಟೆಯ ಸುಮಂಗಲ ಕೋ. ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 7 ಲಕ್ಷ ಸಾಲ ಪಡೆದು ವಂಚಿಸಿದ್ದ.
ಮಾತ್ರವಲ್ಲದೇ ಕರ್ವಾನ್ ಅಟೋಮೊಬೈಲ್ಸ್ ಎಂದು ಅಸ್ತಿತ್ವದಲ್ಲಿರುವ ಕಾರು ಮಾರಾಟ ಸಂಸ್ಥೆಯ ಹೆಸರಿನಲ್ಲಿ ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದ್ರೆ ವಿವಿಧ ಬ್ಯಾಂಕ್ ಗಳಿಗೆ ಬೇರೆಯವರ ಹೆಸರಿನಲ್ಲಿ ಕೊಟೇಶನ್ ನೀಡಿ ಸುಮಾರು 2 ಕೋಟಿ ರೂಪಾಯಿ ಅಧಿಕ ಹಣ ಪಡೆದ ವಂಚನೆ ಎಸಗಿರುವ ಮಾಹಿತಿ ತಿಳಿದು ಬಂದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…