Featured

ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ : ನಳಿನ್ ಕುಮಾರ್ ಕಟೀಲ್ – Vishwanews24

  • ಬಂಟ್ವಾಳ : ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ

  • ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು..

  • ನಳಿನ್ ಕುಮಾರ್ ಕಟೀಲ್ – Vishwanews24

ಬಂಟ್ವಾಳ : ಮುಂಬರುವ ರಾಜ್ಯದ ಹಾನಗಲ್ ಮತ್ತು ಸಿಂಧಗಿ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಂಗಳೂರು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭವಿಷ್ಯ ನುಡಿದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮದಿನಾಚರಣೆಯ ಅಂಗವಾಗಿ ಮಂಗಳೂರು ವಿಧಾನ ಸಭಾ ಕ್ಷೇತ್ರದ ಪುದು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಮೇರಮಜಲು ಗ್ರಾಮದ ಪಕ್ಕಳಪಾದೆ ಸರಸ್ವತಿ ಮಂದಿರದ ಬಳಿ ನಡೆದ ಸೇವೆ ಮತ್ತು ಸಮರ್ಪಣಾ ಕಾರ್ಯಕ್ರಮ ಹಾಗೂ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿಗೆ ಕಾರ್ಯಕರ್ತರೇ ಶಕ್ತಿ ಮತಗಟ್ಟೆಯ ಅಧ್ಯಕ್ಷನಿಂದ ಬಿಜೆಪಿ ಪಕ್ಷ ಬೆಳೆದಿದ್ದು, ಆತನೇ ಬೂತ್‌ಗೆ ಸುಪ್ರಿಂ ಎಂದ ಅವರು ಮುಂದಿನ 20 ವರ್ಷ ಕಾಂಗ್ರೆಸ್ ಪಕ್ಷ ನಿರುದ್ಯೋಗಿಗಳ ಪಕ್ಷವಾಗಲಿದೆ. ಅಧ್ಯಕ್ಷರನ್ನೇ ಆಯ್ಕೆ ಮಾಡಲು ಸಾಧ್ಯವಾಗದ ಕಾಂಗ್ರೆಸ್ ಪಕ್ಷ ಹಲವು ಮಂದಿ ರಾಜ್ಯದಲ್ಲಿ ಮುಖ್ಯಮಂತ್ರಿಯ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಭವಿಷ್ಯದಲ್ಲಿ ಯಾವುದೇ ಗುಡಿ, ಗೋಪುರಗಳನ್ನು ಕೆಡವದಂತೆ ವಿಶೇಷ ವಿಧೇಯಕವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ತಂದಿದ್ದಾರೆ. ಹಿಂದುತ್ವ ವಿಚಾರಧಾರೆಯಲ್ಲಿ ಯಾವುದೇ ರಾಜಿಯಿಲ್ಲ. ದೇವಸ್ಥಾನದ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ಸಿಗರು ರಾಜಕಾರಣಕ್ಕಾಗಿ, ಹಿಂದುಗಳ ಮತ ಪಡೆಯಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ಮಂಗಳೂರು ಮಂಡಲದಲ್ಲಿ ಯಶಸ್ವಿಯಾಗಿ ಸಂಘಟನಾ ಕಾರ್ಯ ನಡೆಯುತ್ತಿದ್ದು ಇದೇ ರೀತಿ ಮುಂದುವರಿದ್ದಲ್ಲಿ ಮುಂಬರುವ ಎಲ್ಲಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

1 hour ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

2 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

2 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

5 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

5 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

5 hours ago