Featured

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ – vishwanews24

ಬಂಟ್ವಾಳ: ಹಿರಿಯ ತುಳು ರಂಗಭೂಮಿ ಕಲಾವಿದ, ಚಲನಚಿತ್ರ ನಟ ರಮೇಶ್ ಕಲ್ಲಡ್ಕ ಹೃದಯಾಘಾತದಿಂದ ನಿಧನ

ಬಂಟ್ವಾಳ: ತುಳು ರಂಗಭೂಮಿ ಹಿರಿಯ ಕಲಾವಿದ, ಚಲನಚಿತ್ರ ನಟ ಚಿ.ರಮೇಶ್ ಕಲ್ಲಡ್ಕ (68) ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಕಲ್ಲಡ್ಕದ ಕೊಳಕೀರು ಮನೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ರಂಗಭೂಮಿಯಲ್ಲಿ 30 ವರ್ಷಗಳಿಗೂ ಹೆಚ್ಚು ಕಾಲ ಕಲಾಸೇವೆಗೈದಿರುವ ರಮೇಶ್ ಕಲ್ಲಡ್ಕ ಕಳೆದ 20 ವರ್ಷಗಳಿಂದ ವಿಜಯಕುಮಾರ್ ಕೊಡಿಯಾಲ್ ಬೈಲ್ ರ ಕಲಾಸಂಗಮದಲ್ಲಿ ಕಲಾವಿದರಾಗಿ ಕಲಾಸೇವೆ ಮಾಡುತ್ತಿದ್ದರು. ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರಿಂದ ತರಬೇತಿ ಪಡೆದ ರಮೇಶ್ ಕಲ್ಲಡ್ಕ ಕಲಾಸಂಗಮದ ಎಲ್ಲಾ ಸಾಮಾಜಿಕ, ಪೌರಾಣಿಕ ನಾಟಕಗಳಲ್ಲಿ ಅಭಿನಯಿಸಿದ್ದಾರೆ.

‘ಶಿವದೂತಗುಳಿಗೆ’ ನಾಟಕದ ಭೀಮಾರಾವ್ ಪಾತ್ರ ಅವರಿಗೆ ವ್ಯಾಪಕ ಮನ್ನಣೆ ತಂದುಕೊಟ್ಟಿದೆ. ಶಿವಾಜಿ ನಾಟಕದಲ್ಲೂ ಅವರು ನಿರ್ವಹಿಸಿದ ದಾದ ಕೊಂಡೆಯ ಪಾತ್ರದ ಅಭಿನಯವು ವ್ಯಾಪಕ ಗಮನ ಸೆಳೆದಿತ್ತು.

ರಂಗಭೂಮಿಯಲ್ಲಿ ಶಿಸ್ತಿನ ಕಲಾವಿದರಾಗಿದ್ದ ರಮೇಶ್ ಕಲ್ಲಡ್ಕ ಅವರು, ಸರಳ ಸೌಮ್ಯಸ್ವಭಾವವರು. ಕಲಾಸಂಗಮದ ಮೂಲಕ ಮುಂಬೈ, ಬೆಂಗಳೂರು ಸಹಿತ ಬೇರೆ ಬೇರೆ ಊರುಗಳಲ್ಲಿ ನಾಟಕ ಪ್ರದರ್ಶನ ನೀಡಿದ್ದರು.

ಮೃತರ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ 11 ಗಂಟೆಗೆ ಕಲ್ಲಡ್ಕದಲ್ಲಿರುವ ರುದ್ರಭೂಮಿಯಲ್ಲಿ ನೆರವೇರಲಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago