ಬಂಟ್ವಾಳ: ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉದಯ ಆಚಾರ್ಯ ಅವರ ಮಗ ಭವಿಷ್ಯ ಆಚಾರ್ಯ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಬಡಕಬೈಲಿನ ಖಾಸಗಿ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದ ಈತ ಕಲಿಕೆ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬುದನ್ನು ಮನೆಯವರು ಶಂಕಿಸಿದ್ದಾರೆ.
ಅಗಸ್ಟ್ 7 ರಂದು ಬುಧವಾರ ರಾತ್ರಿ ಸುಮಾರು 7.30 ಗಂಟೆಗೆ ಸ್ನಾನ ಮಾಡಲೆಂದು ಬಚ್ಚಲು ಕೋಣೆಗೆ ತೆರಳಿದ ಮಗ 8 ಗಂಟೆಯಾದರೂ ವಾಪಸ್ ಬಾರದೇ ಇರುವುದನ್ನು ಕಂಡ ತಾಯಿ ಬಾಗಿಲು ಬಡಿದರೂ ಬಾಗಿಲು ತೆಗೆಯದ ಹಿನ್ನೆಲೆಯಲ್ಲಿ ಬಾಗಿಲು ಮುರಿದು ಒಳಗೆ ನುಗ್ಗಿದಾಗ ಈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಕೂಡಲೇ ಬಾಲಕನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷೆ ನಡೆಸಿದಾಗ ಆತ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…