ಉಡುಪಿ

ಬಂದ್‌ಗೆ ಉಡುಪಿ, ದ.ಕ. ಬಿಜೆಪಿ ಬೆಂಬಲ

ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್‌ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಬೆಂಬಲ ಸೂಚಿಸಿದೆ.

ರೈತರು ಸಹಕಾರಿ ಸಂಘಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ, ಖಾಸಗಿಯಾಗಿ ಮಾಡಿರುವ ಸುಮಾರು 53 ಸಾವಿರ ಕೋಟಿ ರೂ. ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಡುತ್ತೇನೆ ಎಂದು ಹೇಳಿದ್ದರು. ಆದರೆ ಅಧಿಕಾರ ಪಡೆದ ಮೊದಲ ದಿನವೇ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ. ಆದ್ದರಿಂದ ರೈತರು ಕರೆ ನೀಡಿರುವ ಬಂದನ್ನು ಯಶಸ್ವಿಗೊಳಿಸಬೇಕು, ಜಿಲ್ಲಾದ್ಯಂತ ಸ್ವಯಂ ಪ್ರೇರಿತರಾಗಿ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿನಂತಿಸಿದ್ದಾರೆ.

ಶಾಸಕರ ಮನವಿ: ರೈತ ವಿರೋಧಿ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಕರೆಗೆ ಕರಾವಳಿಯ ಪ್ರಜ್ಞಾವಂತ ನಾಗರಿಕರು ಸ್ಪಂದನೆ ನೀಡಿ ಬಂದ್‌ಗೆ ಸಹಕರಿಸಬೇಕಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.

ಸಿಟಿ ಬಸ್ ಬಂದ್ ಇಲ್ಲ
ದ.ಕ. ಜಿಲ್ಲೆಯಲ್ಲಿ ಬಂದ್ ಕುರಿತಂತೆ ಯಾವುದೇ ಸಂಘಟನೆಗಳು ಅಧಿಕೃತವಾಗಿ ಪ್ರಟಕಣೆ ಹೊರಡಿಸಿಲ್ಲ. ಬಸ್ ಬಂದ್ ಮಾಡುವಂತೆಯೂ ನಮ್ಮ ಬಳಿ ಮಾತುಕತೆ ನಡೆಸಿಲ್ಲ. ಶಾಲಾರಂಭ ಹಾಗೂ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ರದ್ದುಗೊಳಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಗರಾದ್ಯಂತ ಬಸ್‌ಗಳು ಎಂದಿನಂತೆ ಸಂಚರಿಸಲಿವೆ. ಅಹಿತರ ಘಟನೆಗಳು ಸಂಭವಿಸಿದರೆ ಸಂಚಾರ ಮೊಟಕುಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿ ಪಾಡಿ ತಿಳಿಸಿದ್ದಾರೆ. ಸರ್ವೀಸ್ ಹಾಗೂ ಎಕ್ಸ್‌ಪ್ರೆಸ್ ಬಸ್ ಮಾಲೀಕರ ಸಂಘವೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಖಾಸಗಿ ಬಸ್ ಸೇವೆ ಯಥಾಸ್ಥಿತಿ: ಖಾಸಗಿ ಬಸ್ ಸೇವೆ ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ. ಬಂದ್ ಬೆಂಬಲಿಸಿ ಸೇವೆ ನಿಲ್ಲಿಸುವ ಬಗ್ಗೆ ಸಿಟಿ ಮತ್ತು ಸರ್ವಿಸ್ ಬಸ್ಸು ಮಾಲೀಕರ ಸಂಘ ನಿರ್ಣಯ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಕೆಲವು ಬಸ್ಸು ಮಾಲೀಕರು ಸ್ವಯಂಪ್ರೇರಿತರಾಗಿ ಸೇವೆ ನಿಲ್ಲಿಸುವ ಸಾಧ್ಯತೆ ಇರಬಹುದು ಎಂದು ಬಸ್ ಮಾಲೀಕರೊಬ್ಬರು  ತಿಳಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago