ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರಾಜ್ಯದ ರೈತರ ಸಾಲಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಕುಮಾರ ಸ್ವಾಮಿ, ಇದೀಗ ಸಾಲಮನ್ನಾಕ್ಕೆ ಮೀನಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ಸೋಮವಾರ ರಾಜ್ಯದ ರೈತರು ಕರೆ ನೀಡಿದ ಬಂದ್ಗೆ ದ.ಕ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಬೆಂಬಲ ಸೂಚಿಸಿದೆ.
ರೈತರು ಸಹಕಾರಿ ಸಂಘಗಳಲ್ಲಿ, ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ, ಖಾಸಗಿಯಾಗಿ ಮಾಡಿರುವ ಸುಮಾರು 53 ಸಾವಿರ ಕೋಟಿ ರೂ. ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಡುತ್ತೇನೆ ಎಂದು ಹೇಳಿದ್ದರು. ಆದರೆ ಅಧಿಕಾರ ಪಡೆದ ಮೊದಲ ದಿನವೇ ಅವರು ತಮ್ಮ ಹೇಳಿಕೆಯಿಂದ ಹಿಂದೆ ಸರಿದಿದ್ದಾರೆ. ಆದ್ದರಿಂದ ರೈತರು ಕರೆ ನೀಡಿರುವ ಬಂದನ್ನು ಯಶಸ್ವಿಗೊಳಿಸಬೇಕು, ಜಿಲ್ಲಾದ್ಯಂತ ಸ್ವಯಂ ಪ್ರೇರಿತರಾಗಿ ಶಾಂತಿಯುತವಾಗಿ ಬಂದ್ ಆಚರಿಸಬೇಕು ಎಂದು ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ವಿನಂತಿಸಿದ್ದಾರೆ.
ಶಾಸಕರ ಮನವಿ: ರೈತ ವಿರೋಧಿ ಸರ್ಕಾರದ ವಿರುದ್ಧ ಸ್ವಯಂ ಪ್ರೇರಿತ ಕರ್ನಾಟಕ ಬಂದ್ ಕರೆಗೆ ಕರಾವಳಿಯ ಪ್ರಜ್ಞಾವಂತ ನಾಗರಿಕರು ಸ್ಪಂದನೆ ನೀಡಿ ಬಂದ್ಗೆ ಸಹಕರಿಸಬೇಕಾಗಿ ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಮನವಿ ಮಾಡಿದ್ದಾರೆ.
ಸಿಟಿ ಬಸ್ ಬಂದ್ ಇಲ್ಲ
ದ.ಕ. ಜಿಲ್ಲೆಯಲ್ಲಿ ಬಂದ್ ಕುರಿತಂತೆ ಯಾವುದೇ ಸಂಘಟನೆಗಳು ಅಧಿಕೃತವಾಗಿ ಪ್ರಟಕಣೆ ಹೊರಡಿಸಿಲ್ಲ. ಬಸ್ ಬಂದ್ ಮಾಡುವಂತೆಯೂ ನಮ್ಮ ಬಳಿ ಮಾತುಕತೆ ನಡೆಸಿಲ್ಲ. ಶಾಲಾರಂಭ ಹಾಗೂ ಪರೀಕ್ಷೆಗಳು ನಡೆಯುತ್ತಿರುವುದರಿಂದ ಬಸ್ ಸಂಚಾರ ರದ್ದುಗೊಳಿಸಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ನಗರಾದ್ಯಂತ ಬಸ್ಗಳು ಎಂದಿನಂತೆ ಸಂಚರಿಸಲಿವೆ. ಅಹಿತರ ಘಟನೆಗಳು ಸಂಭವಿಸಿದರೆ ಸಂಚಾರ ಮೊಟಕುಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿ ಪಾಡಿ ತಿಳಿಸಿದ್ದಾರೆ. ಸರ್ವೀಸ್ ಹಾಗೂ ಎಕ್ಸ್ಪ್ರೆಸ್ ಬಸ್ ಮಾಲೀಕರ ಸಂಘವೂ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದೆ.
ಖಾಸಗಿ ಬಸ್ ಸೇವೆ ಯಥಾಸ್ಥಿತಿ: ಖಾಸಗಿ ಬಸ್ ಸೇವೆ ಉಡುಪಿ ಜಿಲ್ಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ. ಬಂದ್ ಬೆಂಬಲಿಸಿ ಸೇವೆ ನಿಲ್ಲಿಸುವ ಬಗ್ಗೆ ಸಿಟಿ ಮತ್ತು ಸರ್ವಿಸ್ ಬಸ್ಸು ಮಾಲೀಕರ ಸಂಘ ನಿರ್ಣಯ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ. ಒಂದು ವೇಳೆ ಕೆಲವು ಬಸ್ಸು ಮಾಲೀಕರು ಸ್ವಯಂಪ್ರೇರಿತರಾಗಿ ಸೇವೆ ನಿಲ್ಲಿಸುವ ಸಾಧ್ಯತೆ ಇರಬಹುದು ಎಂದು ಬಸ್ ಮಾಲೀಕರೊಬ್ಬರು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…