ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ ; ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಮನವಿ – Vishwanews24
ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ ; ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಮನವಿ – Vishwanews24
ಬೆಂಗಳೂರು: ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.
ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ, ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು.
