Featured

ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ ; ಮಸೀದಿಗಳಲ್ಲಿ ಪ್ರಾರ್ಥನೆಗೆ 50 ಜನರಿಗೆ ಮಾತ್ರ ಅವಕಾಶ -Vishwanews24

ಬಕ್ರೀದ್‌ ಆಚರಣೆಗೆ ಮಾರ್ಗಸೂಚಿ ಪ್ರಕಟ ; ಮಸೀದಿಗಳಲ್ಲಿ ಪ್ರಾರ್ಥನೆಗೆ 50 ಜನರಿಗೆ ಮಾತ್ರ ಅವಕಾಶ -Vishwanews24

ಬೆಂಗಳೂರು: ಇದೇ 21ರಂದು ನಡೆಯಲಿರುವ ಬಕ್ರೀದ್‌ ಹಬ್ಬ ಆಚರಣೆಯ ವೇಳೆ ಮಸೀದಿಗಳಲ್ಲಿ ಒಮ್ಮೆಗೆ 50 ಜನರು ಮಾತ್ರ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡುವಂತೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್‌ ಮತ್ತು ವಕ್ಫ್‌ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನಮಾಜ್‌ ಮಾಡುವಾಗ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು. ಮಸೀದಿ ಪ್ರವೇಶಿಸುವ ಮುನ್ನ ದೇಹದ ತಾಪಮಾನ ಪರೀಕ್ಷಿಸಬೇಕು. ಕೈಗಳನ್ನು ಸೋಪಿನಿಂದ ಅಥವಾ ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಪ್ರಾರ್ಥನೆ ಸಲ್ಲಿಸಲು ಅಗತ್ಯವಿರುವ ಮುಸಲ್ಲಾವನ್ನು (ವಸ್ತ್ರ) ಮನೆಯಿಂದಲೇ ತರುವಂತೆ ಸೂಚಿಸಬೇಕು. ಆಲಿಂಗನ ಮತ್ತು ಹಸ್ತಲಾಘವಕ್ಕೆ ಅವಕಾಶ ನೀಡಬಾರದು. 50ಕ್ಕಿಂತ ಹೆಚ್ಚು ಜನರು ಸೇರಿದಲ್ಲಿ ಪಂಕ್ತಿಯ ಆಧಾರದಲ್ಲಿ ಪ್ರಾರ್ಥನೆ ಸಲ್ಲಿಸಲು ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ

ಪ್ರಾಣಿ ವಧೆಗೆ ನಿರ್ಬಂಧ: ಬಕ್ರೀದ್‌ ಹಬ್ಬದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ರಸ್ತೆಗಳು, ಪಾದಚಾರಿ ಮಾರ್ಗಗಳು, ಆಸ್ಪತ್ರೆಗಳ ಆವರಣಗಳು, ನರ್ಸಿಂಗ್‌ ಹೋಂಗಳ ಒಳ ಮತ್ತು ಹೊರಾಂಗಣಗಳು, ಶಾಲಾ, ಕಾಲೇಜುಗಳ ಒಳಾಂಗಣ ಮತ್ತು ಹೊರಾಂಗಣ, ಆಟದ ಮೈದಾನ, ಮಸೀದಿ ಮತ್ತು ಇತರೆ ಧಾರ್ಮಿಕ ಸ್ಥಳಗಳು, ಉದ್ಯಾನದ ಒಳಗೆ, ಹೊರಗೆ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರಾಣಿವಧೆ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago