Featured

ಬಕ್ರೀದ್ ಹಬ್ಬದ ಆಚರಣೆಗೆ ಪ್ರಾಣಿ ಸಾಗಾಟ ಮಾಡಲು ಅನುಮತಿ ನೀಡುವಂತೆ ಕೋರಿ ಸಿಎಂಗೆ ಪತ್ರ ಬರೆದ ಅಲ್ಪಸಂಖ್ಯಾತ ಜನಪ್ರತಿನಿಧಿಗಳು -Vishwanews24

ಬೆಂಗಳೂರು: ಬಕ್ರೀದ್ ಹಬ್ಬದ ಆಚರಣೆಗೆ ಸೂಕ್ತ ರಕ್ಷಣೆ ಕೋರಿ, ಹಾಗೂ ಪ್ರಾಣಿ ಸಾಗಾಟ ಮಾಡಲು ಅನುಮತಿ ನೀಡುವಂತೆ ಕೋರಿ ಅಲ್ಪಸಂಖ್ಯಾತ ಸಮುದಾಯದ ಶಾಸಕ ಹಾಗೂ ವಿಧಾನ ಪರಿಷತ್ ನ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರು 1400 ಸಾಲಿನ ಹಿಂದಿನಿಂದಲೂ ಬಕ್ರೀದ್‌ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದು, ಈ ಹಬ್ಬವು ಮುಸ್ಲಿಂ ಸಮುದಾಯದ ಪವಿತ್ರವಾದ ಹಬ್ಬವಾಗಿರುತ್ತದೆ. ಈ ಹಬ್ಬದ ದಿನದಂದು ಎಲ್ಲಾ ಮುಸ್ಲಿಂ ಸಮುದಾಯದವರು ಅವರ ಸಾಮರ್ಥ್ಯಕ್ಕೆ ತಕ್ಕಂತೆ ದೇವರ ಹೆಸರಿನಲ್ಲಿ ಬಲಿಯನ್ನು ನೀಡಿ, ಅದನ್ನು ಬಡ ವರ್ಗದವರಿಗೆ ದಾನವಾಗಿ ನೀಡುತ್ತಾ ಬಂದಿರುತ್ತಾರೆ. ಇದು ದಶಕಗಳಿಂದ ಪರಂಪರೆಯಾಗಿ ನಡೆದುಕೊಂಡು ಬಂದಿರುತ್ತದೆ, ಹಾಗೂ ಎಲ್ಲಾ ಮುಸ್ಲಿಂ ಸಮುದಾಯದವರು ಇದನ್ನು ಆಚರಿಸಲೇ ಬೇಕಾಗಿರುತ್ತದೆ.

ಆದುದರಿಂದ ತಾವು ಆಗಸ್ಟ್ 12 ರಂದು ಕರ್ನಾಟಕ ರಾಜ್ಯದಾದ್ಯಂತ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಾಣಿಗಳನ್ನು ವಾಹನದಲ್ಲಿ ಸಾಗಿಸಲು ಅಡಚಣೆ ಮಾಡದಂತೆ ಹಾಗೂ ಈ ಹಬ್ಬವನ್ನು ಸುಗಮವಾಗಿ ನಡೆಸಲು, ಅನುಕೂಲವಾಗುವಂತೆ ಪೊಲೀಸ್‌ ಇಲಾಖೆಗೆ ಮತ್ತು ಜಿಲ್ಲಾಡಳಿತದಿಂದ ಸೂಕ್ತ ರಕ್ಷಣೆ ನೀಡುವಂತೆ ಆದೇಶಿಸಲು ಕೋರುತ್ತೇವೆ ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.

ಶಾಸಕ ತನ್ವೀರ್ ಸೇಠ್, ಜಮೀರ್ ಅಹ್ಮದ್ ಖಾನ್ , ರಹೀಂ ಖಾನ್, ಖನೀಜ್ ಫಾತೀಮಾ, ಎಮ್.ಎ ಹ್ಯಾರೀಸ್ , ವಿಧಾನ ಪರಿಷತ್ ಸದಸ್ಯರಾದ ಸಿ.ಎಂ ಇಬ್ರಾಹಿಂ, ನಸೀರ್ ಅಹ್ಮದ್, ರಿಜ್ವಾನ್ ಅರ್ಶದ್, ಅಬ್ದುಲ್ ಜಬ್ಬಾರ್ ಮನವಿ ನೀಡಿದ್ದಾರೆ. ಸಿಎಂ ಇದಕ್ಕೆ ಸ್ಪಂದಿಸಿ ಈ ಬಗ್ಗೆ ರಾಜ್ಯಪೊಲೀಸ್ ಮಹಾನಿರ್ದೇಶಕರು ಗಮನ ಹರಿಸುವಂತೆ ತಿಳಿಸಿದ್ದಾರೆ.

Vishwa News 24

Recent Posts

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 minutes ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

20 minutes ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

29 minutes ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

41 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

3 hours ago