ಬೆಂಗಳೂರು: ಬಕ್ರೀದ್ ಹಬ್ಬದ ಆಚರಣೆಗೆ ಸೂಕ್ತ ರಕ್ಷಣೆ ಕೋರಿ, ಹಾಗೂ ಪ್ರಾಣಿ ಸಾಗಾಟ ಮಾಡಲು ಅನುಮತಿ ನೀಡುವಂತೆ ಕೋರಿ ಅಲ್ಪಸಂಖ್ಯಾತ ಸಮುದಾಯದ ಶಾಸಕ ಹಾಗೂ ವಿಧಾನ ಪರಿಷತ್ ನ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದವರು 1400 ಸಾಲಿನ ಹಿಂದಿನಿಂದಲೂ ಬಕ್ರೀದ್ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದು, ಈ ಹಬ್ಬವು ಮುಸ್ಲಿಂ ಸಮುದಾಯದ ಪವಿತ್ರವಾದ ಹಬ್ಬವಾಗಿರುತ್ತದೆ. ಈ ಹಬ್ಬದ ದಿನದಂದು ಎಲ್ಲಾ ಮುಸ್ಲಿಂ ಸಮುದಾಯದವರು ಅವರ ಸಾಮರ್ಥ್ಯಕ್ಕೆ ತಕ್ಕಂತೆ ದೇವರ ಹೆಸರಿನಲ್ಲಿ ಬಲಿಯನ್ನು ನೀಡಿ, ಅದನ್ನು ಬಡ ವರ್ಗದವರಿಗೆ ದಾನವಾಗಿ ನೀಡುತ್ತಾ ಬಂದಿರುತ್ತಾರೆ. ಇದು ದಶಕಗಳಿಂದ ಪರಂಪರೆಯಾಗಿ ನಡೆದುಕೊಂಡು ಬಂದಿರುತ್ತದೆ, ಹಾಗೂ ಎಲ್ಲಾ ಮುಸ್ಲಿಂ ಸಮುದಾಯದವರು ಇದನ್ನು ಆಚರಿಸಲೇ ಬೇಕಾಗಿರುತ್ತದೆ.
ಆದುದರಿಂದ ತಾವು ಆಗಸ್ಟ್ 12 ರಂದು ಕರ್ನಾಟಕ ರಾಜ್ಯದಾದ್ಯಂತ ನಡೆಯುತ್ತಿರುವ ಸಂದರ್ಭದಲ್ಲಿ ಪ್ರಾಣಿಗಳನ್ನು ವಾಹನದಲ್ಲಿ ಸಾಗಿಸಲು ಅಡಚಣೆ ಮಾಡದಂತೆ ಹಾಗೂ ಈ ಹಬ್ಬವನ್ನು ಸುಗಮವಾಗಿ ನಡೆಸಲು, ಅನುಕೂಲವಾಗುವಂತೆ ಪೊಲೀಸ್ ಇಲಾಖೆಗೆ ಮತ್ತು ಜಿಲ್ಲಾಡಳಿತದಿಂದ ಸೂಕ್ತ ರಕ್ಷಣೆ ನೀಡುವಂತೆ ಆದೇಶಿಸಲು ಕೋರುತ್ತೇವೆ ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.
ಶಾಸಕ ತನ್ವೀರ್ ಸೇಠ್, ಜಮೀರ್ ಅಹ್ಮದ್ ಖಾನ್ , ರಹೀಂ ಖಾನ್, ಖನೀಜ್ ಫಾತೀಮಾ, ಎಮ್.ಎ ಹ್ಯಾರೀಸ್ , ವಿಧಾನ ಪರಿಷತ್ ಸದಸ್ಯರಾದ ಸಿ.ಎಂ ಇಬ್ರಾಹಿಂ, ನಸೀರ್ ಅಹ್ಮದ್, ರಿಜ್ವಾನ್ ಅರ್ಶದ್, ಅಬ್ದುಲ್ ಜಬ್ಬಾರ್ ಮನವಿ ನೀಡಿದ್ದಾರೆ. ಸಿಎಂ ಇದಕ್ಕೆ ಸ್ಪಂದಿಸಿ ಈ ಬಗ್ಗೆ ರಾಜ್ಯಪೊಲೀಸ್ ಮಹಾನಿರ್ದೇಶಕರು ಗಮನ ಹರಿಸುವಂತೆ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…