Featured

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ : ಡಿಕೆಶಿ – vishwanews24

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ : ಡಿಕೆಶಿ

ಬೆಂಗಳೂರು : ರಾಜ್ಯದೊಳಗಿನ ಯಾವುದೇ ವಿಚಾರಗಳನ್ನು ರಾಜ್ಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಅನಾವಶ್ಯಕ ಗೊಂದಲವನ್ನು ಸೃಷ್ಟಿಸುತ್ತಿರುವುದು ಮಾಧ್ಯಮಗಳೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ರಾಜ್ಯದ ಸ್ಥಳೀಯ ಸಮಸ್ಯೆಯನ್ನು ಸ್ಥಳೀಯ ನಾಯಕರೇ ಬಗೆಹರಿಸಿಕೊಳ್ಳಬೇಕು” ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮಲ್ಲಿ ಸಮಸ್ಯೆಯೇ ಇಲ್ಲ. ಇನ್ನು ಬಗೆಹರಿಸಿಕೊಳ್ಳುವುದೇನು ಇದೆ? ನಾನು ಹೇಳಬೇಕಾದದ್ದನ್ನು ಮುಖ್ಯಮಂತ್ರಿಗಳಿಗೂ ಹೇಳಿದ್ದೇನೆ, ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೂ ಹೇಳಿದ್ದೇನೆ. ಸಮಸ್ಯೆ ಸೃಷ್ಟಿಸುತ್ತಿರುವುದು ನೀವೇ (ಮಾಧ್ಯಮ)” ಎಂದು ಸ್ಪಷ್ಟಪಡಿಸಿದರು.

ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಅಧಿಕಾರ ಹಸ್ತಾಂತರ, ಕುರ್ಚಿ ಕಿತ್ತಾಟದ ಬಗ್ಗೆ ಉಭಯ ಬಣಗಳಿಂದ ಹೇಳಿಕೆ–ಪ್ರತಿಹೇಳಿಕೆಗಳು ಮುಂದುವರಿದಿದ್ದವು. ಈ ವಿಚಾರ ಸದನದಲ್ಲಿಯೂ ಪ್ರತಿಧ್ವನಿಸಿತ್ತು. ಹೈಕಮಾಂಡ್‌ ಸೂಚನೆ ಬರುವವರೆಗೂ ತಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈ ನಡುವೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಹೈಕಮಾಂಡ್‌ನತ್ತ ಗಮನ ಹರಿಸುತ್ತಿರುವ ಸಂದರ್ಭದಲ್ಲೇ, ಮಲ್ಲಿಕಾರ್ಜುನ ಖರ್ಗೆ ಅವರು ಸ್ಥಳೀಯವಾಗಿಯೇ ವಿಚಾರ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

3 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

6 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago