Featured

ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ – Vishwanews24

ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ

ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಖಂಡಿಸಿ ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ.

ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್​ ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಹೇಳಿದ್ದಾರೆ. ಸಾಗರದ ಜನತೆ ನಾಳೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್​ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಅನ್ಯಕೋಮಿನ ಯುವಕನೊಬ್ಬ ಮಚ್ಚು ಬೀಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಮೀರ್‌ ಎಂಬಾತನಿಂದ ಈ ಕೃತ್ಯ ನಡೆದಿದೆ. ಸುನೀಲ್‌ ಮೇಲೆ ಸಮೀರ್‌ ಮಚ್ಚು ಬೀಸಿದ್ದಾನೆ. ದಾಳಿ ವೇಳೆ ಕೂದಲೆಳೆ ಅಂತರದಲ್ಲಿ ಸುನೀಲ್‌ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಈ ನಿನ್ನೆ ಸಾಗರದಲ್ಲಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಈ ಯಾತ್ರೆಯಲ್ಲಿ ಸುನೀಲ್‌ ಜತೆ ಸಮೀರ್‌ ತೆರಳಿದ್ದರು. ಈ ವೇಳೆ ಸುನೀಲ್‌ ಮೇಲೆ ಮಚ್ಚು ಬೀಸಿ ಸಮೀರ್‌ ಪರಾರಿಯಾಗಿದ್ದಾನೆ.ಈ ಸಂಬಂಧ ಸಾಗರ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ : ದೇಶಾದ್ಯಂತ ‘ಸೇವಾ ಸಂಕಲ್ಪʼ ಅಭಿಯಾನ – vishwanews24

ಸರ್ಕಾರದ ಮುಖ್ಯಸ್ಥರಾಗಿ 25 ವರ್ಷ ಪೂರೈಸಿದ ಮೋದಿ ;  ದೇಶಾದ್ಯಂತ 1 ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನವದೆಹಲಿ:…

13 minutes ago

ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ – vishwanews24

 ಪಣಂಬೂರು ಬೀಚ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಹೆಜಮಾಡಿ ಕೋಡಿಯಲ್ಲಿ ಪತ್ತೆ ಉಡುಪಿ: ಪಣಂಬೂರು ಬೀಚ್‌ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ…

23 minutes ago

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

21 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

21 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

22 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

22 hours ago