ಶಿವಮೊಗ್ಗ: ಜಿಲ್ಲೆಯ ಸಾಗರ ಪಟ್ಟಣದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನಿಸಿದ ಘಟನೆ ಖಂಡಿಸಿ ಸಾಗರದಲ್ಲಿ ನಾಳೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ.
ಸಾಗರದಲ್ಲಿ ನಾಳೆ ಬೆಳಗ್ಗೆ ಯಿಂದ ಮಧ್ಯಾಹ್ನ 2ಗಂಟೆ ವರೆಗೆ ಅಘೋಷಿತ ಬಂದ್ ಗೆ ಕರೆ ನೀಡಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ಮುಖಂಡ ರವೀಶ್ ಹೇಳಿದ್ದಾರೆ. ಸಾಗರದ ಜನತೆ ನಾಳೆ ಸ್ವಯಂ ಪ್ರೇರಣೆಯಿಂದ ನಾಳಿನ ಬಂದ್ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಅನ್ಯಕೋಮಿನ ಯುವಕನೊಬ್ಬ ಮಚ್ಚು ಬೀಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ಘಟನೆ ನಡೆದಿದೆ. ಸಮೀರ್ ಎಂಬಾತನಿಂದ ಈ ಕೃತ್ಯ ನಡೆದಿದೆ. ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದಾನೆ. ದಾಳಿ ವೇಳೆ ಕೂದಲೆಳೆ ಅಂತರದಲ್ಲಿ ಸುನೀಲ್ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ. ಈ ನಿನ್ನೆ ಸಾಗರದಲ್ಲಿ ಶೌರ್ಯ ಸಂಚಲನ ಯಾತ್ರೆ ನಡೆದಿತ್ತು. ಈ ಯಾತ್ರೆಯಲ್ಲಿ ಸುನೀಲ್ ಜತೆ ಸಮೀರ್ ತೆರಳಿದ್ದರು. ಈ ವೇಳೆ ಸುನೀಲ್ ಮೇಲೆ ಮಚ್ಚು ಬೀಸಿ ಸಮೀರ್ ಪರಾರಿಯಾಗಿದ್ದಾನೆ.ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…
ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಬಾಲಕ ಮೃತ್ಯು ಮಂಗಳೂರು: ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ಗೆಳೆಯರೊಂದಿಗೆ…
ಮಂಗಳೂರು: ಕರಾವಳಿಯ ಮೀನುಗಾರ ಮುಖಂಡ , ಬಿಜೆಪಿ ಹಿರಿಯ ನಾಯಕ ರಾಮಚಂದ್ರ ಬೈಕಂಪಾಡಿ ನಿಧನ ಮಂಗಳೂರು : ಕರಾವಳಿಯ ಪ್ರಭಾವಿ…
ಮಂಗಳೂರು: ಯುವತಿ ನಾಪತ್ತೆ ; ಪ್ರಕರಣ ದಾಖಲು ಮಂಗಳೂರು: ಮುಲ್ಕಿ ತಾಲೂಕು ಕಾರ್ನಾಡು ಗ್ರಾಮದ ಲಿಂಗಪ್ಪಯ್ಯಕಾಡು ಬಿಜಾಪುರ ಕಾಲನಿ ನಿವಾಸಿ…