ಮಂಗಳೂರು: ‘ಮಿಥುನ್ ರೈ ಬಜರಂಗಳದ ಸುದ್ದಿಗೆ ಬಂದರೆ ತಲೆ ಕಡಿಯಲು ಸಿದ್ದ ಎಂದು ಕೇಸರಿ ಬಾವುಟ ಹಿಡಿದುಕೊಂಡು ಯುವಕನೊಬ್ಬ ಬಿಜೆಪಿ ವಿಜಯೋತ್ಸವದ ವೇಳೆ ಹೇಳಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ ಬಳಿಕ ಬಡಕಬೈಲ್ ಸಮಿತಿಯ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಯೂತ್ ಕಾಂಗ್ರಸೆ ಜಿಲ್ಲಾಧ್ಯಕ್ಷ ಮಿಥುನ್ ರೈಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆಯೊಟ್ಟಿದ್ದಾರೆ.
ವೀಡಿಯೋದಲ್ಲೇನಿದೆ?:
“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬ ಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಬಿಜೆಪಿ ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿ ಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಬಿಜೆಪಿ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ಕಂಡು ಬರುತ್ತದೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…