Featured

ಬಜೆಟ್ ಅಧಿವೇಶನ ಬಳಿಕ ಜನತಾ ಜಲಧಾರೆಯ ಗಂಗಾ ರಥಯಾತ್ರೆ ಆರಂಭ : ಎಚ್ ಡಿಕೆ – Vishwanews24

ಬಜೆಟ್ ಅಧಿವೇಶನ ಬಳಿಕ ಜನತಾ ಜಲಧಾರೆಯ ಗಂಗಾ ರಥಯಾತ್ರೆ ಆರಂಭ : ಎಚ್ ಡಿಕೆ – Vishwanews24

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪೂರ್ಣಗೊಂಡ ಬೆನ್ನಲ್ಲೇ ಜೆಡಿಎಸ್‌ನಿಂದ ‘ಜನತಾ ಜಲಧಾರೆಯ ಗಂಗಾ ರಥಯಾತ್ರೆ’ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಥಯಾತ್ರೆಗೆ ಈ ಹಿಂದೆಯೇ ಸಿದ್ಧತೆ ನಡೆದಿತ್ತಾದರೂ ಕೋವಿಡ್ ಮೂರನೇ ಅಲೆ ತೀವ್ರತೆ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅದು ಮುಗಿದ ತತ್ ಕ್ಷಣ ರಥಯಾತ್ರೆ ಆರಂಭಗೊಳ್ಳಲಿದೆ ಎಂದರು.

ಈ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 4 ಜಿಲ್ಲೆಗಳ ಶಾಸಕರು, ಮುಖಂಡರ ಜತೆ ಮಹತ್ವದ ಸಭೆ ನಡೆಸಿದರು. ಕಣಕಂಬಿ, ಮಹದಾಯಿ, ಕೃಷ್ಣಾ ಜಲಾನಯನ ಪ್ರದೇಶ, ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದ ಶಾಸಕರು, ಮುಖಂಡರ ಜತೆ ಸಮಾಲೋಚಿಸಿದರು.

ಇದನ್ನೂ ಓದಿ :

ರಾಜ್ಯದ ನೀರಾವರಿ ಸಮಸ್ಯೆಗೆ ಜೆಡಿಎಸ್ ಯಾವ ರೀತಿ ಪರಿಹಾರ ನೀಡಲಿದೆ ಎಂಬುದನ್ನು ಜನಸಾಮಾನ್ಯಗೆ ವಿವರಿಸಿ ಹೇಳಬೇಕು. ಬೆಳಗಾವಿಯಲ್ಲಿ ಪಕ್ಷಕ್ಕೆ ಉತ್ತಮ ಬೆಂಬಲವಿದೆ. ಇಲ್ಲಿನ ಎಲ್ಲ ತಾಲೂಕು ಕೇಂದ್ರಗಳಲ್ಲಿ ರಥಯಾತ್ರೆ ಹಾದು ಹೋಗಬೇಕು. ಪಕ್ಷದ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದವರು ಇದೇ ವೇಳೆ ಸೂಚಿಸಿದರು.

ಮಹದಾಯಿ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಜನರಿಗೆ ನೀರಿನ ವಿಚಾರದಲ್ಲಿ ಆಗಿರುವ ಅನ್ಯಾಯವನ್ನು ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ ಹೇಗೆ ಪರಿಹರಿಸಲಿದೆ ಎಂಬುದನ್ನೂ ಮನವರಿಕೆ ಮಾಡಿಕೊಡಬೇಕು. ಎಲ್ಲಾ ಸಿದ್ಧತೆಗಳನ್ನು ತತ್ ಕ್ಷಣವೇ ಮುಗಿಸಿಕೊಳ್ಳಿ. ಶೀಘ್ರ ರಥಯಾತ್ರೆಯ ದಿನಾಂಕವನ್ನು ಪ್ರಕಟಿಸಲಾಗುವುದು ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಶೆಂಪೂರ್, ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ, ಹಿರಿಯ ಶಾಸಕ ವೆಂಕಟ ರಾವ್ ನಾಡಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ :

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago