ನವದೆಹಲಿ: ಜಿಎಸ್‌ಟಿ (ಸರಕು ಮತ್ತು ಸೇವಾ ತೆರಿಗೆ) ಜಾರಿ ಐತಿಹಾಸಿಕ ಕ್ರಮವಾಗಿದ್ದು, ಅದನ್ನು ರೂಪಿಸಿದ ಅರುಣ್ ಜೇಟ್ಲಿ ಅವರಿಗೆ ನನ್ನ ನಮನ ಸಲ್ಲಿಸುತ್ತೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ಸಂಸತ್ ನಲ್ಲಿ 2020ನೇ ಸಾಲಿನ ಆಯವ್ಯಯ ಪಟ್ಟಿ ಓದುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ಜನರ ಖರೀದಿ ಸಾಮರ್ಥ್ಯ ವೃದ್ಧಿಸುವ ಬಜೆಟ್ ಇದು. ತಂತ್ರಜ್ಞಾನದ ನೆರವಿನಿಂದ ಜನರ ಬದುಕು ಸುಧಾರಿಸಲು ನಾವು ಬದ್ಧರಾಗಿದ್ದೇವೆ. ಸಮಾಜದ ಎಲ್ಲ ವರ್ಗಗಳ ಆಶೋತ್ತರಗಳನ್ನು ಬಿಂಬಿಸುವ ಬಜೆಟ್ ಇದು. 2014–19ರ ಅವಧಿಯಲ್ಲಿ ನಮ್ಮ ಸರ್ಕಾರವು ಅಡಳಿತದಲ್ಲಿ ಬದಲಾವಣೆ ತಂದಿತ್ತು. ಮೂಲಭೂತ ವ್ಯವಸ್ಥೆಯ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ನಾವು ಗಮನ ಕೊಟ್ಟೆವು. ಹಣದುಬ್ಬರ ನಿಯಂತ್ರಣದಲ್ಲಿಡುವ ಜೊತೆಗೆ ಬ್ಯಾಂಕ್‌ಗಳ ಕೆಟ್ಟ ಸಾಲದ ಬಗ್ಗೆ ಗಮನ ನೀಡಲಾಯಿತು. ಅಂತೆಯೇ ತಮ್ಮ ಭಾಷಣದಲ್ಲಿ ಮಾಜಿ ವಿತ್ತ ಸಚಿವ, ದಿವಂಗತ ಅರುಣ್ ಜೇಟ್ಲಿ ಅವರನ್ನು ನೆನೆದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…