Featured

ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್ – vishwanews24

ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದ ಯೋಜನೆಗಳಿಗೆ ಆದ್ಯತೆ ನೀಡಬೇಕು, ನೀರಾವರಿ ಯೋಜನೆಗಳಿಗೆ ಈಗಾಗಲೇ ಘೋಷಣೆ ಮಾಡಿರುವ ಹಣ ಇನ್ನು ಬಿಡುಗಡೆಯಾಗಿಲ್ಲ. ಕರ್ನಾಟಕ ರಾಜ್ಯದಿಂದ ನೀವು ಆಯ್ಕೆಯಾಗಿದ್ದು, ರಾಜ್ಯದ ಯೋಜನೆಗಳು ಹಾಗೂ ಬೆಂಗಳೂರಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಮನವಿ ಮಾಡಿದ್ದೆ ಎಂದರು.

ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಮಂತ್ರಿಗಳ ಭೇಟಿಗೆ ಕಾಲಾವಕಾಶ ಕೋರಿದ್ದೆ. ಕಳೆದ ಬಜೆಟ್ ಗಳಲ್ಲಿ ಭದ್ರ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5 ಸಾವಿರ ಕೋಟಿಯನ್ನು ಇನ್ನು ನೀಡಿಲ್ಲ. ಈ ಬಾರಿಯ ಬಜೆಟ್ ನಲ್ಲೂ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯದ ವಿರುದ್ಧ ಯಾವ ರೀತಿಯ ಹೋರಾಟ ಮಾಡಬೇಕು ಎಂದು ಚರ್ಚೆ ಮಾಡುತ್ತೇವೆ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ನಲ್ಲಿ ಬಹಳ ನಿರಾಸೆಯಾಗಿದೆ” ಎಂದು ತಿಳಿಸಿದರು.

ಡಿ.ಕೆ. ಸುರೇಶ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, “ನಾನು ಅಖಂಡ ಭಾರತದ ಪ್ರಜೆ. ಸುರೇಶ್ ಅವರು ಜನರ ಬೇಸರ ಹಾಗೂ ಅಭಿಪ್ರಾಯವನ್ನು ಹೇಳಿದ್ದಾರೆ ಅಷ್ಟೇ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಾವೆಲ್ಲರೂ ಭಾರತ ಮಾತೆಯ ಮಕ್ಕಳು ನಾವು ಒಗ್ಗಟ್ಟಾಗಿರಬೇಕು. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಒಂದೇ. ಹಿಂದಿ ಭಾಗಕ್ಕೆ ಹೇಗೆ ಆದ್ಯತೆ ನೀಡಲಾಗುತ್ತಿದೆಯೋ ಅದೇ ರೀತಿ ನಮಗೂ ಆದ್ಯತೆ ನೀಡಬೇಕು” ಎಂದರು.

ಬಜೆಟ್ ಅನ್ಯಾಯದ ಬಗ್ಗೆ ಕೇಳಿದಾಗ, ನಮ್ಮ ರಾಜ್ಯದಿಂದ 26 ಸಂಸದರನ್ನು ಆಯ್ಕೆ ಮಾಡಿ ಕಳುಹಿಸಲಾಗಿತ್ತು. ಈಗ 27ನೇಯವರೂ ಸೇರಿಕೊಂಡಿದ್ದಾರೆ. 27 ಸಂಸದರು ಸೇರಿ ನಮ್ಮ ರಾಜ್ಯಕ್ಕೆ ಏನು ತಂದಿದ್ದಾರೆ? ಈಗಲಾದರೂ 27 ಸಂಸದರು ಸಂಸತ್ತಿನ ಮುಂದೆ ಧರಣಿ ಮಾಡಲಿ ಎಂದು ಕೋರುತ್ತೇನೆ ಎಂದು ತಿಳಿಸಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago