ಬಜೆಟ್ ನಲ್ಲಿ ಬಿಡುಗಡೆ ಮಾಡಿದ ಹಣ ಸುಣ್ಣಬಣ್ಣ ಬಳಿಯೋಕೂ ಆಗಲ್ಲ, ಯಾವುದರಲ್ಲೂ ಸ್ಪಷ್ಟತೆ ಇಲ್ಲ : ಎಚ್.ಡಿ. ಕುಮಾರಸ್ವಾಮಿ -Vishwanews24

ಬೆಂಗಳೂರು: ಬಜೆಟ್‍ನಲ್ಲಿ ಕೊಟ್ಟಿರುವ ಅನುದಾನ ಸುಣ್ಣ-ಬಣ್ಣ ಬಳಿಯಲೂ ಸಾಕಾಗೋಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸಿಎಂ ಯಡಿಯೂರಪ್ಪ ಅವರ ಬಜೆಟ್ ಮಂಡನೆಯನ್ನು ಟೀಕಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಬಜೆಟ್‍ನ ಎರಡನೇ ಪುಟದಲ್ಲೋ 3ನೇ ಪುಟದಲ್ಲೋ ನರೇಂದ್ರ ಮೋದಿ ಅವರ ಮಾರ್ಗದಲ್ಲಿ ಹೋಗುತ್ತೇವೆ ಎಂದು ಹೇಳಿಕೊಂಡಿದ್ದಾರೆ. ಕೇಂದ್ರದ ಅನುದಾನ ಬರಲ್ಲ, ಅದಕ್ಕೆ ಹೀಗೆ ಬಜೆಟ್‍ನಲ್ಲಿ ಏನು ಇಲ್ಲ ಎಂದರು.

ನಮ್ಮ ರಾಜ್ಯ ತೆರೆಗೆ ಸಂಗ್ರಹದಲ್ಲಿ ಇಷ್ಟೆಲ್ಲಾ ಬಿಕ್ಕಟ್ಟು ಇದ್ದರೂ ಹಿಂದೆ ಬಿದ್ದಿಲ್ಲ. ಕಳೆದ ಬಾರಿ ನಾವು ಬಜೆಟ್ ಮಂಡನೆ ಮಾಡಿದಾಗ ಏನು ನಿರೀಕ್ಷೆ ಇಟ್ಟುಕೊಂಡಿದ್ದೆವೋ, ಆ ನಿರೀಕ್ಷೆ ಹತ್ತಿರ ಹೋಗಿದ್ದೇವೆ. ಶೇ. 14 ರಷ್ಟು ಹೆಚ್ಚಿನ ತೆರೆಗೆ ಸಂಗ್ರಹ ಕೂಡ ಆಗಿದೆ ಎಂದರು.

ಈಗ ಕೊಟ್ಟಿರುವ ಹಣ ನೋಡಿದರೆ, ಅದರಲ್ಲೂ ಆರೋಗ್ಯ ಇಲಾಖೆಗೆ ಕೊಟ್ಟಿರುವ ಅನುದಾನದಲ್ಲಿ ಸುಣ್ಣ-ಬಣ್ಣ ಬಳಿಯಲು ಸಾಧ್ಯವಿಲ್ಲ. ಬಜೆಟ್‍ನಲ್ಲಿ ಯಾವುದು ಸ್ಪಷ್ಟನೆ ಆಗಿಲ್ಲ. ನಮ್ಮ ಯೋಜನೆಯನ್ನು ಈ ಸರ್ಕಾರ ಮುಂದುವರಿಸುವುದಕ್ಕೆ ಸಾಧ್ಯನೆ ಇಲ್ಲ. ಹೀಗಾಗಿ ಈ ಸರ್ಕಾರ ಜನರಿಗೆ ಯಾವುದೇ ರೀತಿಯ ಸ್ಪಷ್ಟನೆ ಕೊಡಲು ಸಾಧ್ಯವಾಗಿಲ್ಲ ಎಂದು ಕುಮಾರಸ್ವಾಮಿ ಬಜೆಟ್ ಅನ್ನು ಟೀಕಿಸಿದರು.

 

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

5 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

6 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

6 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

8 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

8 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago