Featured

ಬಜೆಟ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ  : ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ : ಸುನಿಲ್‌ ಕುಮಾರ್‌ ಆಕ್ರೋಶ – vishwanews24

ಬಜೆಟ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ  : ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ : ಸುನಿಲ್‌ ಕುಮಾರ್‌ ಆಕ್ರೋಶ

ಬೆಂಗಳೂರು: ಇಷ್ಟು ದಿ‌ನ ಮುಸ್ಲಿಮರಿಗೆ ತೆರೆಮರೆಯಲ್ಲಿ ವಿಶೇಷ ಆದ್ಯತೆ ನೀಡುತ್ತಿದ್ದ ಸಿದ್ದರಾಮಯ್ಯ  ಈಗ ಅದನ್ನು ಬಜೆಟ್‌ಗೂ ವಿಸ್ತರಿಸಿದ್ದಾರೆ. ಹಣಕಾಸು ತಜ್ಞರ ಒಡೆದಾಳುವ ಆರ್ಥಿಕತೆ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಿ ಕಾಮಗಾರಿಗಳಲ್ಲಿ 2 ಕೋಟಿ ರೂ.ವರೆಗಿನ ಗುತ್ತಿಗೆ ಮತ್ತು 1 ಕೋಟಿ ರೂ.ವರೆಗಿನ ಖರೀದಿಯಲ್ಲಿ ಮುಸ್ಲಿಂ ಮೀಸಲಾತಿ ಕಲ್ಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದೆ. ಸರ್ಕಾರದ ಹಿಂದೂ ವಿರೋಧಿ ನೀತಿಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಪ್ರಶ್ನಿಸಿದ್ದಾರೆ.

ಕಡುಬು ತಿನ್ನುವುದು ಕಹಿ ನೀರು ಕುಡಿಯುವುದು. ರಾಜ್ಯವನ್ನು 1,16,000 ಕೋಟಿ ರೂ. ಸಾಲದ ಶೂಲಕ್ಕೆ ದೂಡಿರುವ ಸಿದ್ದರಾಮಯ್ಯನವರ ಹದಿನಾರನೇ ಬಜೆಟ್ ಕರ್ನಾಟಕವನ್ನು ಅಕ್ಷರಶಃ ಆರ್ಥಿಕ ದುಸ್ಥಿತಿಗೆ ದೂಡಲಿದೆ ಎಂದು ಕಿಡಿಕಾರಿದ್ದಾರೆ.

ಬಜೆಟ್ ಎನ್ನುವುದು ನನ್ನ ದೃಷ್ಟಿಯಲ್ಲಿ ಕೇವಲ ಬಿಳಿಹಾಳೆಯಲ್ಲ ಎಂದು ವ್ಯಾಖ್ಯಾನಿಸಿರುವ ಸಿದ್ದರಾಮಯ್ಯನವರು ಶಾಶ್ವತ ಯೋಜನೆಗಳತ್ತ ಗಮನ ಹರಿಸಿಲ್ಲ. ಕರಾವಳಿ ಭಾಗದ ಜಿಲ್ಲೆಗಳಿಗಂತೂ ಯಾವುದೇ ಕೊಡುಗೆ ಇಲ್ಲ. ಮಂಗಳೂರಿನಿಂದ ಕಾರವಾರದವರೆಗಿನ ಕೊಂಕಣ ರೈಲ್ವೆ ಯೋಜನೆಗೆ ಸರ್ಕಾರ ನೆರವಿನ ಹಸ್ತ ಚಾಚಿಲ್ಲ ಎಂದು ದೂರಿದ್ದಾರೆ.

ಆಕರ್ಷಣೀಯ ಘೋಷಣೆಗಳು, ಕವಿವಾಣಿಯ ಉಲ್ಲೇಖದಲ್ಲೇ ಬಜೆಟ್ ಪುಸ್ತಕ ತುಂಬಿದ್ದು, ಶಿಕ್ಷಣ, ಆರೋಗ್ಯ, ಜಲಸಂನ್ಮೂಲ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಆಮೂಲಾಗ್ರ ಅಭಿವೃದ್ಧಿಗೆ ಯಾವುದೇ ಕೊಡುಗೆ ಇಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

13 minutes ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

3 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

4 hours ago

ಅಕ್ಟೋಬರ್‌ನಲ್ಲಿ ಮಂಗಳೂರು – ಕುವೈಟ್‌ ನೇರ ವಿಮಾನ ಆರಂಭ -vishwanews24

ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್‌ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್‌ ನೇರ…

5 hours ago

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ -vishwanews24

ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್‌ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…

5 hours ago

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿಗೆ SDPI ರಾಜ್ಯಾಧ್ಯಕ್ಷ ಪತ್ರ -vishwanews24

ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…

6 hours ago