ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ಧಾರೇಶ್ವರ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.
ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.
1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು
ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.
ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…