ಉಡುಪಿ

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ – Vishwanews24

ಬಡಗುತಿಟ್ಟು ಯಕ್ಷಗಾನ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನದ  ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ (67) ಇಹಲೋಕದ ತಿರುಗಾಟ ನಿಲ್ಲಿಸಿದ್ದಾರೆ. ಕಂಚಿನ ಕಂಠದ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಬೆಂಗಳೂರಿನ ಪುತ್ರನ ಮನೆಯಲ್ಲಿ ಇಂದು ಬೆಳಗ್ಗೆ 4:30ರ ವೇಳೆಗೆ ಧಾರೇಶ್ವರ ನಿಧನರಾದರು. ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳಕ್ಕೆ ನಿವೃತ್ತಿ ಹೇಳಿದ್ದರು.

ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು.

1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು

ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago