ಉಡುಪಿ: ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ ಬಡಜನರು ಬದುಕು ಕಟ್ಟಿಕೊಳ್ಳಲು ಅನುಕೂಲ ಆಗಿದೆ. ಪಂಚ ಗ್ಯಾರಂಟಿ ಯೋಜನೆಯಿಂದ ಜನರ ಖರೀದಿ ಸಾಮರ್ಥ್ಯ ಕೂಡ ಹೆಚ್ಚಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ ಮಂಡಿಸಿರುವ 4.9 ಲಕ್ಷ ಕೋಟಿ ರೂ. ಬಜೆಟ್ ನಲ್ಲಿ 1 ಲಕ್ಷ ಕೋಟಿ ರೂ. ಗ್ಯಾರಂಟಿ ಯೋಜನೆ ಸಹಿತ ವಿವಿಧ ಯೋಜನೆಗಳ ಮೂಲಕ ಜನರಿಗೆ ವರ್ಗಾವಣೆ ಆಗುತ್ತಿದೆ. ಇದರಿಂದ ಜನರ ಖರೀದಿ ಸಾಮರ್ಥ್ಯ ಹೆಚ್ಚಳವಾಗಿದೆ. ಅಲ್ಲದೆ, ರಾಜ್ಯದ ಜನರ ತಲಾ ಆದಾಯ ಕೂಡ ಹೆಚ್ಚಳವಾಗಿದ್ದು, 2024–25ನೇ ಸಾಲಿನಲ್ಲಿ ಕರ್ನಾಟಕ ದೇಶದಲ್ಲೇ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದರು.
ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿ ಆಗುತ್ತದೆ. ಬಿಟ್ಟಿ ಭಾಗ್ಯದಿಂದ ಜನರು ಸೋಮಾರಿ ಆಗುತ್ತಾರೆ ಅಂತಾ ಬಿಜೆಪಿ ಟೀಕೆ ಮಾಡಿತ್ತು. ಆದರೆ ಈಗ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿಯೇ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ ಎಂದು ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ ಸುಕುಮಾರ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…