Featured

ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ : ಪ್ರಧಾನಿ  ಮೋದಿ -Vishwanews24

ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ : ಪ್ರಧಾನಿ  ಮೋದಿ -Vishwanews24

ಆಲಿಗಢ: ಇಂದು ರಾಷ್ಟ್ರವು ಧರ್ಮವು ಹೊರತಾದ ಹಾದಿಯಲ್ಲಿದ್ದು, ಜನರ ಸಾಂವಿಧಾನಿಕ ಹಕ್ಕುಗಳು ಮತ್ತು ಅವರ ಭವಿಷ್ಯ ಹಾಗೂ ಯಾವುದೇ ಸಮುದಾಯಗಳು ಹಿಂದೆ ಉಳಿದಿಲ್ಲ ಎಂದು ಭರವಸೆ ನೀಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

ಆಲಿಗಢ ಮುಸ್ಲಿಂ ಯೂನಿವರ್ಸಿಟಿ ಶತಮಾನೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ. ರಾಷ್ಟ್ರದ ಏಳಿಗೆ ಮತ್ತು ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಪಕ್ಕಕ್ಕಿಟ್ಟು ಅಭಿವೃದ್ಧಿಯೆಡೆಗೆ ಗಮನ ನೀಡುತ್ತೇವೆಂಬ ಭರವಸೆ ನೀಡಿದರು.

ಯಾವುದೇ ಪಕ್ಷಪಾತವಿಲ್ಲದೆ ದೇಶದ ಎಲ್ಲಾ ನಾಗರಿಕರು ಅನುಕೂಲವನ್ನು ಪಡೆಯುವ ಹಾದಿಯಲ್ಲಿ ಇಂದು ದೇಶವಿದೆ. ಧರ್ಮ ಕಾರಣದಿಂದ ಯಾರೊಬ್ಬರು ಸಹ ಹಿಂದೆ ಉಳಿಯದ ಹಾದಿಯಲ್ಲಿ ನಾವಿದ್ದೇವೆ. ಎಲ್ಲರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ದೇಶ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.

ನಾವು ಯಾವುದೇ ಧರ್ಮದಲ್ಲಿ ಜನಿಸಿರಲಿ, ರಾಷ್ಟ್ರೀಯ ಗುರಿಗಳೊಂದಿಗೆ ನಮ್ಮ ಆಸೆಗಳನ್ನು ಯಾವ ರೀತಿ ಹೊಂದಿಸುತ್ತೇವೆ ಎಂಬುದು ಮುಖ್ಯವಾಗಿದೆ. ಸಮಾಜದಲ್ಲಿ ಸೈದ್ಧಾಂತಿಕ ಭಾಗಗಳಿರಬಹುದು ಆದರೆ, ಅಭಿವೃದ್ಧಿ ಅಂತ ಬಂದಾಗ ಎಲ್ಲವೂ ಕೂಡ ಅಧೀನವಾಗಿ ಉಳಿಯುತ್ತದೆ. ರಾಷ್ಟ್ರ ಅಂತಾ ಬಂದಾಗ ಸೈದ್ಧಾಂತಿಕ ಭಿನ್ನಾಭಿಪ್ರಾಯದ ಮಾತಿಲ್ಲ ಎಂದು ಪ್ರಧಾನಿ ತಿಳಿಸಿದರು.

ಎಎಮ್​ಯು ಅನೇಕ ಸ್ವಾತಂತ್ರ್ಯ ಹೋರಾಟಗಾರರನ್ನು ಸೃಷ್ಟಿಸಿದೆ. ಹೀಗಾಗಿಯೇ ನಾನಿಂದು ಇಲ್ಲಿಗೆ ಬಂದಿದ್ದೇನೆ. ಹೋರಾಟಗಾರರಲ್ಲಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯವಿದ್ದರೂ ಸಹ ಸ್ವಾತಂತ್ರ್ಯಕ್ಕಾಗಿ ಎಲ್ಲರೂ ಒಗ್ಗೂಡಿದರು. ಸ್ವಾತಂತ್ರ್ಯ ಅವರನ್ನು ಒಂದುಗೂಡಿಸಿತು. ಹೀಗಾಗಿ ನಾವೆಲ್ಲ ಒಟ್ಟಾಗಿ ನವ ಭಾರತಕ್ಕಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

2 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

2 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

3 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

3 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

4 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

4 hours ago