Featured

ಬಡವರಿಗೆ ಶೀಘ್ರವೇ ಉಚಿತ ಮರಳು ನೀತಿ : ಮುರುಗೇಶ್ ನಿರಾಣಿ -Vishwanews24

ಬಡವರಿಗೆ ಶೀಘ್ರವೇ ಉಚಿತ ಮರಳು ನೀತಿ : ಮುರುಗೇಶ್ ನಿರಾಣಿ -Vishwanews24

ಬೆಂಗಳೂರು: ರಾಜ್ಯದಲ್ಲಿ ಬಡವರು ಹಾಗೂ ಜನಸಾಮಾನ್ಯರು 10 ಲ. ರೂ. ವೆಚ್ಚದಲ್ಲಿ ಮನೆ ಕಟ್ಟಲು ಅನುಕೂಲವಾಗುವಂತೆ ಶೀಘ್ರ ನೂತನ ಉಚಿತ ಮರಳು ನೀತಿಯನ್ನು ಜಾರಿಗೆ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ ಶಾಸಕ ಸಿ. ಎನ್‌.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮರಳು ಸಮಸೆಯನ್ನು ನೀಗಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಶ್ರಯ ಮನೆ ಹಾಗೂ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಮಾ ಣವಾಗುವ 10 ಲಕ್ಷ ರೂ. ವೆಚ್ಚದ ಮನೆಗೆ 100ರಿಂದ 200 ರೂ. ಗೆ ಟನ್‌ ಮರಳು ಪೂರೈಕೆ ಮಾಡುವ ಉಚಿತ ಮರಳು ನೀತಿಯನ್ನು ಜಾರಿಗೆ ಮಾಡುತ್ತೇವೆ ಎಂದು ಪ್ರಕಟಿಸಿದರು.

ಇದನ್ನೂ ಓದಿ : ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24

ಬಡವರು ಹೆಚ್ಚಿನ ಹಣ ಭರಿಸಿ ಮನೆ ಕಟ್ಟಲು ಮರಳು ಖರೀದಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸರಕಾರದಿಂದಲೇ ಉಚಿತವಾಗಿ ಮರಳು ಪೂರೈಸುವ ಯೋಜನೆ ಇದೆ ಪ್ರಸ್ತುತ ರಾಜ್ಯದ 193 ಮರಳು ನಿಕ್ಷೇಪ ಪ್ರದೇಶಗಳನ್ನು ಗುರುತಿಸಿ 87 ಬ್ಲಾಕ್‌ಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದರು.

ಕಠಿನ ಕ್ರಮ

ರಾಜ್ಯದ ಬಹುತೇಕ ಕಡೆ ಒಂದೇ ಪರ್ಮಿಟ್‌ನಲ್ಲಿ ಅನೇಕರು ಕಾನೂನು ಬಾಹಿರವಾಗಿ ಮರಳು ಸಾಗಿಸುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅನೇಕ ಕಡೆ ಸಭೆಗಳನ್ನು ನಡೆಸಿ ಇದಕ್ಕೆ ಕಡಿವಾಣ ಹಾಕಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ ಎಂದರು. ರಾಜ್ಯದ ಎಲ್ಲ ಕಡೆ ಮರಳಿನ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಕಂದಾಯ, ಅರಣ್ಯ, ಗೃಹ, ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಇಂತಹ ದೂರುಗಳು ಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಏಕಗವಾಕ್ಷಿ ಪದ್ಧತಿಯನ್ನು ಜಾರಿ ಮಾಡುತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ : ಉಡುಪಿ : ದ್ವಿತೀಯ ಪಿಯು ಪರೀಕ್ಷೆಯಲ್ಲಿ ಜಿಲ್ಲೆಗೆ ಈ ಬಾರಿಯೂ ಮೊದಲನೇ ಸ್ಥಾನ ಬರಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

24 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

27 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

32 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

37 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago