Featured

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ – vishwanews24

ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ : ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ

ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಅನಧಿಕೃತ ಬಿಪಿಎಲ್ ಕಾರ್ಡ್‍ಗಳೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದ್ದು, ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.

ಅವರು ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದ ಅವರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಉಡುಪಿ ಜಿಲ್ಲೆಯಲ್ಲಿ ಸುಮಾರು 38 ಸಾವಿರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50 ಸಾವಿರ ಬಿಪಿಎಲ್ ಕಾರ್ಡ್‍ಗಳನ್ನು ಅನಧಿ ಕೃತ ಎಂಬ ಹಣೆಪಟ್ಟಿ ಕಟ್ಟಿ ಗುರುತಿಸಲಾಗಿದೆ. ಶ್ರೀಮಂತರಲ್ಲಿ ಬಿಪಿಎಲ್ ಕಾರ್ಡ್‍ಗಳಿದ್ದರೆ ರದ್ದು ಮಾಡುವುದಕ್ಕೆ ನಮ್ಮ ಆಕ್ಷೇಪ ವಿಲ್ಲ. ಆದರೆ ಬಡವರಿಗೆ ಅನ್ಯಾಯ ಆಗಬಾರದು. ಸರಕಾರ ಗೃಹಲಕ್ಷ್ಮೀ ಮೂಲಕ ನೀಡುತ್ತಿರುವ ಮಾಸಿಕ 2 ಸಾವಿರ ರೂ.ಗಳನ್ನು ಬಿಪಿಎಲ್ ಕಾರ್ಡ್‍ದಾರರಿಗೆ ಮಾತ್ರ ಸೀಮಿತಗೊಳಿಸಬೇಕೆಂಬ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಈ ರೀತಿ 12 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡಿದರೆ ಗೃಹಲಕ್ಷ್ಮೀಯ ಹಣ ಒಂದಷ್ಟು ಉಳಿತಾಯ ಮಾಡಬಹುದು ಎಂಬ ಲೆಕ್ಕಾಚಾರ ಸರಾರದಲ್ಲಿದೆಯೇ ಎಂಬ ಗುಮಾನಿ ಇದೆ.

1993ರ ಅವಧಿಯಲ್ಲಿ ಗ್ರಾಪಂಗಳು ಅಸ್ತಿತ್ವಕ್ಕೆ ಬಂದಾಗ ಗ್ರಾಪಂ ಸದಸ್ಯರಿಗೆ 20 ರೂ. ಸಿಟ್ಟಿಂಗ್ ಫೀಸ್ ನೀಡಲಾಗುತ್ತಿತ್ತು. ಅದು ನಿಧಾನವಾಗಿ ಏರುತ್ತಾ ಬಂದಿದ್ದು, 2008ರಲ್ಲಿ ಬಿ.ಎಸ್. ಯಡಿಯೂರಪ್ಪ ಸರಕಾರ 27 ಕೋಟಿ ಗೌರವ ಧನ ಬಿಡು ಗಡೆ ಮಾಡಿತ್ತು. 2021ರಲ್ಲಿ ನಾನು ವಿಧಾನ ಪರಿಷತ್ ಸದಸ್ಯನಾಗಿ ಮರು ಆಯ್ಕೆಯಾದ ಬಳಿಕ ಸರಕಾರದ ಗಮನ ಸೆಳೆದು ಗ್ರಾಪಂ ಸದಸ್ಯರ ಗೌರವ ಧನ 1ರಿಂದ 2 ಸಾವಿರ, ಉಪಾಧ್ಯಕ್ಷರಿಗೆ 2 ಸಾವಿರದಿಂದ 4 ಸಾವಿರ, ಅಧ್ಯಕ್ಷರಿಗೆ 3ರಿಂದ 6 ಸಾವಿರಕ್ಕೆ ಏರಿಸಲಾಯಿತು. ನಾವು ನಿರಂತರವಾಗಿ ಪಂಚಾಯಿತಿ ರಾಜ್ ವ್ಯವಸ್ಥೆ ಬಲಪಡಿಸಲು ಯತ್ನಿಸುತ್ತಿ ದ್ದೇವೆ. ಆದರೆ ಕಾಂಗ್ರೆಸ್ ಸರಕಾರಕ್ಕೆ ಇದರಲ್ಲಿ ಆಸಕ್ತಿಯಿಲ್ಲ. ಅದು ಪಂಚಾಯತ್‍ರಾಜ್ ವ್ಯವಸ್ಥೆಯ ಬುಡವನ್ನೇ ಅಲ್ಲಾಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.

 

ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ಕೋಡಿಬೈಲು, ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್, ಪುತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ನಿತೀಶ್ ಕುಮಾರ್ ಶಾಂತಿವನ, ಸಂತೋಷ್ ರೈ ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago