Featured

ಬದ್ಧತೆಯಿಂದ ಕೂಡಿದ ನೌಕರ ವರ್ಗವೇ ಸಂಸ್ಥೆಯ ಅಮೂಲ್ಯ ಆಸ್ತಿ : ಅಶೋಕ್ ಕಾಮತ್ -Vishwanews24

ಬದ್ಧತೆಯಿಂದ ಕೂಡಿದ ನೌಕರ ವರ್ಗವೇ ಸಂಸ್ಥೆಯ ಅಮೂಲ್ಯ ಆಸ್ತಿ : ಅಶೋಕ್ ಕಾಮತ್ -Vishwanews24

ಬದ್ಧತೆಯಿಂದ ಕೂಡಿದ ನೌಕರವರ್ಗ ಮತ್ತು ಸಮರ್ಥ ಮುಂದಾಳತ್ವ ಇದ್ದಲ್ಲಿ ಯಾವುದೇ ಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗಲು ಸಾಧ್ಯ ಪ್ರಾಮಾಣಿಕ ಪ್ರಯತ್ನವೊಂದೇ ಯಶಸ್ಸಿಗೆ ಮೂಲ ಮಂತ್ರ ಎಂದು ಜಿಲ್ಲಾ ಶಿಕ್ಷಕ ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಅಶೋಕ್ ಕಾಮತ್ ರವರು ಅಭಿಪ್ರಾಯಪಟ್ಟರು ಅವರು ಪದೋನ್ನತಿ ಯೊಂದಿಗೆ ವರ್ಗಾವಣೆ ಹೊಂದಿದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗ ಮುಖ್ಯಸ್ಥ ವಿಶ್ವನಾಥ ಬಾಯರಿ ಯವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು ಸ್ವಪ್ರತಿಷ್ಠೆ, ಸ್ವಹಿತಾಸಕ್ತಿ ಬದಿಗಿರಿಸಿ ದುಡಿಯುವ ನೌಕರವರ್ಗ ಸಂಸ್ಥೆಯ ಅಮೂಲ್ಯ ಆಸ್ತಿ. ಆ ನೌಕರರನ್ನು ಸಮರ್ಥವಾಗಿ ಮುನ್ನಡೆಸುವ ಯೋಗ್ಯ ಮುಂದಾಳು ಇದ್ದಲ್ಲಿ ಸಂಸ್ಥೆ ಮುನ್ನೆಲೆಗೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ವಿಶ್ವನಾಥ ಬಾಯರಿ ಯವರ ಮುಂದಾಳತ್ವದಿಂದ ಈ ಸಂಸ್ಥೆ ಇಷ್ಟು ಎತ್ತರಕ್ಕೆ ಏರಲು ಸಾಧ್ಯವಾಗಿದೆ ಎಂದು ಹೇಳಿದರು.

ಪದವಿ ಪೂರ್ವ ಕಾಲೇಜು ವಿಭಾಗದ ಪ್ರಭಾರ ಪ್ರಾಂಶುಪಾಲ ಯಾದವ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಎಸ್. ಡಿ.ಎಂ.ಸಿ ಉಪಾಧ್ಯಕ್ಷೆ ಶ್ರೀಮತಿ ತಾರಾದೇವಿ, ಶಿಕ್ಷಣ ಸ್ಥಾಯಿ ಸಮಿತಿಯ ಶೇಖರ್ ಕೋಟ್ಯಾನ್, ದಾನಿ ನಿರುಪಮಾ ಪ್ರಸಾದ್ ಶೆಟ್ಟಿ, ಮಹಾಮಾಯಾ ಫೌಂಡೇಶನ್ ನ ಉಷಾ ಪೈ, ಎಸ್ ಡಿ ಎಂ ಸಿ ಸದಸ್ಯರು ಅತಿಥಿಗಳಾಗಿ ಭಾಗವಹಿಸಿ ಶುಭಾಶಯ ಕೋರಿದರು. ವಿಶ್ವನಾಥ ಬಾಯರಿ ದಂಪತಿ ಅವರನ್ನು ಸನ್ಮಾನಿಸಲಾಯಿತು. ಉಪನ್ಯಾಸಕ ಗಂಗಾಧರ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಉರಾಳ್ ವಂದಿಸಿದರು ಶಿಕ್ಷಕ ಶೇಖರ್ ಬೋವಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago