ಉಡುಪಿ

ಬನ್ನಂಜೆ ನಾರಾಯಣಗುರು ಮಂದಿರದ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದನೆ – ಉಡುಪಿ ಎಸ್ಪಿಗೆ ದೂರು – vishwanews24

ಉಡುಪಿ : ಬನ್ನಂಜೆ ನಾರಾಯಣಗುರು ಮಂದಿರದ ವಿರುದ್ಧ ಅವಾಚ್ಯ ಶಬ್ದ ಬಳಸಿ ನಿಂದನೆ – ಉಡುಪಿ ಎಸ್ಪಿಗೆ ದೂರು

ಉಡುಪಿ : ಅಯೋಧ್ಯೆಯಲ್ಲಿ ರಾಮಮಂದಿರ ಪ್ರತಿಷ್ಠೆ ದಿನ ರಾಮಧ್ವಜ ಆಳವಡಿಸದ ಹಿನ್ನಲೆ ಉಡುಪಿ ಬನ್ನಂಜೆ ನಾರಾಯಣಗುರು ಮಂದಿರಕ್ಕೆ ಅವಾಚ್ಯ ಶಬ್ದಗಳ ಬಳಸಿ ನಿಂದಿಸಿದ ವಿಡಿಯೋ ಮಾಡಿದ ಅನಾಮಿಕ ವ್ಯಕ್ತಿ ವಿರುದ್ಧ ಮಂದಿರದ ಆಡಳಿತ ಮಂಡಳಿಯಿಂದ ಎಸ್‌ಪಿಗೆ ದೂರು ನೀಡಿದರು.

ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠೆಯ ದಿನ ಬನ್ನಂಜೆ ನಾರಾಯಣಗುರು ಮಂದಿರದಲ್ಲಿ ಧ್ವಜ ಹಾಕಿಲ್ಲ ಎಂದು ಆರೋಪಿಸಿ ಉಡುಪಿ ಬಿಲ್ಲವರ ಸೇವಾ ಸಂಘದ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ವೈರಲ್ ಮಾಡಿರುವ ಕಿಡಿಗೇಡಿ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಸಂಘದ ನಿಯೋಗ ಇಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಅವರಿಗೆ ಮನವಿ ಸಲ್ಲಿಸಿತು.

ಬನ್ನಂಜೆ ನಾರಾಯಣ ಗುರು ಸಂಘ 80 ವರ್ಷದಿಂದ ಸಾಮಾಜಿಕ ಚಟುವಟಿಕೆ ಮಾಡುತ್ತಿದೆ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಮಾಡುವ ಕೆಲಸ ಮಾಡುತ್ತಿದೆ. ರಾಮಮಂದಿರ ಪ್ರತಿಷ್ಠಾಪನೆ ದಿನ ನಾವು ವಿಶೇಷ ಪೂಜೆ ನೆರವೇರಿಸಿದ್ದೇವೆ. ಆದರೆ ಮಂದಿರದ ಆವರಣದಲ್ಲಿ ಧ್ವಜ ಮಾತ್ರ ಅಳವಡಿಸಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಉಡುಪಿ ಎಸ್​ಪಿ ಅರುಣ್​ ಮಾತನಾಡಿ, ಬನ್ನಂಜೆ ನಾರಾಯಣ ಗುರು ಮಂದಿರದ ಆಡಳಿತ ಮಂಡಳಿ ಅವಾಚ್ಯ ಶಬ್ದ ಬಳಸಿ ನಿಂದಿಸಿರುವ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯುತ್ತೇವೆ. ದೂರಿನ ಆಧಾರದ ಮೇಲೆ ತಾಂತ್ರಿಕವಾಗಿ ತನಿಖೆ ನಡೆಸುತ್ತೇವೆ. ಈ ಬಗ್ಗೆ ನಾವು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಎಫ್​ಐಆರ್​ ಮಾಡುವ ಬಗ್ಗೆ ಚಿಂತನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

15 hours ago