Featured

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ – vishwanews24

ಬಯಲಾಟ  ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು  : ಇಬ್ಬರು ಮಕ್ಕಳು ಸಾವು, ನಾಲ್ವರಿಗೆ ಗಂಭೀರ ಗಾಯ

ರಾಯಚೂರು: ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು  ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬೈಲ್ ಮರ್ಚೆಡ್ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. 7 ಜನರು ಕಮಾನು ಕೆಳಗೆ ಕುಳಿತು ನಾಟಕ ವೀಕ್ಷಿಸುತ್ತಿದ್ದರು. ಈ ವೇಳೆ ಕಮಾನಿನ ಗೋಡೆ ಕುಸಿದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಅವಘಡದಲ್ಲಿ ನಾಲ್ವರು ಮಹಿಳೆಯರಿಗೆ ಗಂಭೀರ ಗಾಯವಾಗಿದೆ.

ಇದನ್ನೂ ಓದಿ: 

ಗಾಯಾಳುಗಳನ್ನು ಲಕ್ಷ್ಮಿ, ವಿಶಾಲಕ್ಷಿ, ಯಲ್ಲಮ್ಮ ಹಾಗೂ ಬಸಮ್ಮ ಎಂದು ಗುರುತಿಸಲಾಗಿದೆ. ಇವರಿಗೆ ಕಾಲು ಮುರಿದಿದೆ. ಬಸಮ್ಮ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತದೇಹಗಳನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago