ಪಂಜಾಬ್ : ಹುಟ್ಟು ಹಬ್ಬದ ಕೇಕ್ ತಿಂದು ಬಾಲಕಿಯೊಬ್ಬಳು ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿ ಬಂದಿದ್ದು, ಅದರಲ್ಲಿ ಬಾಲಕಿಯ ಸಾವಿಗೆ ಕಾರಣ ತಿಳಿದು ಬಂದಿದೆ.
ಹುಟ್ಟುಹಬ್ಬದ ದಿನವೇ ಕೇಕ್ ತಿಂದು ಪಂಜಾಬ್ನ 10 ವರ್ಷದ ಬಾಲಕಿ ಮಾನ್ವಿ ಸಾವನ್ನಪ್ಪಿದ್ದು ದೊಡ್ಡ ಸುದ್ದಿಯಾಗಿತ್ತು. ಆನ್ ಲೈನ್ ನಲ್ಲಿ ಕೇಕ್ ತರಿಸಿ ಬಾಲಕಿಯ ಬರ್ತಡೇ ಆಚರಿಸಿದ್ದ ಪ್ಯಾಮಿಲಿ , ಕೇಕ್ ತಿಂದ ಬಾಲಕಿ ಮರುದಿನ ಆಸ್ಪತ್ರೆಯಲ್ಲಿ ಸಾವನಪ್ಪಿದ್ದರು. ಇದೀಗ ಬಾಲಕಿಯ ಮರೋಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಹೌದು, ಬಾಲಕಿ ಮೃತಪಟ್ಟ ಬಳಿಕ ಕೇಕ್ ಅನ್ನು ಸಂಗ್ರಹಿಸಿದ ಆರೋಗ್ಯ ಅಧಿಕಾರಿಗಳು ಪರೀಕ್ಷೆಗೆ ಕಳುಹಿಸಿದ್ದರು. ಇದೀಗ ಅದೇ ಕೇಕ್ನಲ್ಲಿ ಹೆಚ್ಚಿನ ಪ್ರಮಾಣದ ಸಿಹಿ ರುಚಿಯ ಸಿಂಥೆಟಿಕ್ ಅನ್ನು ಬಳಸಲಾಗಿದೆ. ಹೀಗಾಗಿ ಅತಿಯಾಗಿ ಕೇಕ್ ತಿಂದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಆರೋಗ್ಯ ಅಧಿಕಾರಿ, ಡಿಎಚ್‌ಒ ಡಾ ವಿಜಯ್ ಜಿಂದಾಲ್ ಎನ್‌ಡಿಟಿವಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಸ್ಯಾಕ್ರರಿನ್ ಅನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಸಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ತ್ವರಿತವಾಗಿ ಹೆಚ್ಚಿಸಲು ಕಾರಣವಾಗಬಹುದು. ಹೀಗಾಗಿ ಸಾವುಗಳು ಕೂಡ ಸಂಭವಿಸಬಹುದು ಎಂದು ತಿಳಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…