ಉಡುಪಿ : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಕೊರತೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದ್ದು ಬರಗಾಲ ಛಾಯೆ ಮೂಡಿದೆ. ಹೀಗಾಗಿ ಸರ್ಕಾರವು ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೇ ಘೋಷಣೆ ಮಾಡಿದೆ.
ಇದಕ್ಕಾಗಿ ಬರ ಪೀಡಿತ ತಾಲೂಕುಗಳ ನಿರ್ವಹಣೆಗಾಗಿ ಸರ್ಕಾರ ರಾಜ್ಯದ ಎಲ್ಲಾ ತಾಲೂಕುಗಳಿಗೆ ಅನುದಾನವನ್ನು ಬಿಡುಗಡೆಗೊಳಿಸಿ ಆದೇಶ ಮಾಡಿದೆ. ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೂ 3 ಕೋ.ರೂ. ಮೀಸಲಿಡಲಾಗಿದೆ. ಉಡುಪಿ ಜಿಲ್ಲಾ ಬರ ನಿರ್ವಹಣೆಗೆ 4.50ಕೋ.ರೂ ಬಿಡುಗಡೆ ಮಾಡಿದೆ.
ಬರ ತಾಲೂಕುಗಳಲ್ಲಿ ಕುಡಿಯುವ ನೀರು ಸಹಿತ ವಿವಿಧ ತುರ್ತು ಕಾಮಗಾರಿಗಳಿಗೆ ಈ ಅನುದಾನ ಬಳಕೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಡುಪಿ ಜಿಲ್ಲೆಯ ಬರ ನಿರ್ವಹಣೆ ಸಂಬಂಧ ಸರಕಾರದಿಂದ ಅನುದಾನ ಮಂಜೂರಾತಿಗೆ ಆದೇಶ ಆಗಿದ್ದು, ಇದರ ಪ್ರತಿ ಇನ್ನಷ್ಟೇ ಲಭ್ಯವಾಗವೇಕಿದೆ. ಅನುದಾನವನ್ನು ನಿರ್ದಿಷ್ಟ ಮಾನದಂಡದಂತೆ ವಿನಿಯೋಗ ಮಾಡಲಾಗುತ್ತದೆ. ಉಡುಪಿಯಲ್ಲಿ ತುರ್ತು ನಿರ್ವಹಣೆಗೆ ಸುಮಾರು ೧೨ ಕೋ. ರೂ ಸದ್ಯ ಲಭ್ಯವಿದೆ ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…