Featured

ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ; ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು : ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ, : ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ಬಲಿಷ್ಠ ದೇಶದಲ್ಲಿ ಸಮರ್ಥ ನಾಗರಿಕರು ಎಂಬುದು ನಮ್ಮ ಸರ್ಕಾರದ ಧ್ಯೇಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.

ಬಜೆಟ್​ ಮಂಡನೆ ವೇಳೆ ಮಾತನಾಡಿದ ಅವರು, ದೇಶವನ್ನು ಎಲ್ಲ ಕ್ಷೇತ್ರಗಳಲ್ಲಿ ಬಲಿಷ್ಠಗೊಳಿಸಬೇಕು. ನಮ್ಮ ದೇಶ ಅಭಿವೃದ್ಧಿಯೆಡೆಗೆ ದಾಪುಗಾಲು ಹಾಕುತ್ತಿದೆ. ಹಾಗೇ ಇಲ್ಲಿನ ಪ್ರತಿಯೊಬ್ಬರೂ ಕೂಡ ಸಶಕ್ತ ಜೀವನ ನಡೆಸಬೇಕು ಎಂಬುದು ನಮ್ಮ ಧ್ಯೇಯವಾಗಿದ್ದು ಇನ್ನು ಮುಂದೆ ಕೂಡ ಇದೇ ರೀತಿ ಮುಂದುವರಿಯುತ್ತೇವೆ ಎಂದು ಹೇಳಿದರು.

2014ರಲ್ಲಿ 1.8 ಟ್ರಿಲಯನ್​ ಅಮೆರಿಕನ್​ ಡಾಲರ್​ ಆರ್ಥಿಕತೆ ಇದ್ದಿದ್ದು, ಸದ್ಯ ಅದು 2.7 ಟ್ರಿಲಿಯನ್​ಗೆ ತಲುಪಿದೆ. ಪ್ರಸಕ್ತ ವರ್ಷ 3 ಟ್ರಿಲಿಯನ್​ ಅಮೆರಿಕನ್​ ಡಾಲರ್​ ಆರ್ಥಿಕತೆ ಸಾಧಿಸುವ ವಿಶ್ವಾಸವಿದೆ. ಖಂಡಿತ ಕೆಲವೇ ವರ್ಷಗಳಲ್ಲಿ ನಮ್ಮ ದೇಶದ ಆರ್ಥಿಕತೆ 5 ಟ್ರಿಲಿಯನ್​ ಅಮೆರಿಕನ್​ ಡಾಲರ್​ಗೆ ತಲುಪಲಿದೆ. ಇದು ನಮ್ಮ ನಿಶ್ಚಿತ ಗುರಿ. ಇದಕ್ಕಾಗಿ ಮೂಲಭೂತ ಸುಧಾರಣೆ ಅಗತ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶಕ್ಕೆ ಬೇಕಾದ ಅಗತ್ಯ ಸೌಕರ್ಯಗಳು, ಡಿಜಿಟಲ್​ ಆರ್ಥಿಕತೆಯ ಮೇಲೆ ಹೂಡಿಕೆ ಮಾಡುವ ಅಗತ್ಯ ಹೆಚ್ಚಾಗಿದೆ. ಅಲ್ಲದೆ, ಮಧ್ಯಮ ಮತ್ತು ಸಣ್ಣ ಉದ್ದಿಮೆಗಳಲ್ಲಿ ಉದ್ಯೋಗ ಸೃಷ್ಟಿಸಲು ಹೆಚ್ಚು ಒತ್ತು ನೀಡಬೇಕು. ಖರೀದಿ ಸಾಮರ್ಥ್ಯ ಸಮಾನತೆಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆ ಹೊಂದಿದೆ ಎಂದು ತಿಳಿಸಿದರು.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago