ಬಳೆತೊಟ್ಟಿಲ್ಲ ಎಂಬುದು ಆಡುಭಾಷೆ – ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತಾಡುವ ಮುನ್ನಾ ಎಚ್ಚರವಿರಲಿ:ಮಹಿಳಾ ಕಾಂಗ್ರೆಸ್ ಗೆ ಬಿಜೆಪಿ ಮಹಿಳಾಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ತಿರುಗೇಟು
ಉಡುಪಿ: ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಐದು ಗ್ಯಾರಂಟಿ ಗಳನ್ನು ಕೂಡಲೇ ಜಾರಿಗೆ ತರಬೇಕು.ಇಲ್ಲದಿದ್ದಲ್ಲಿ ಜಿಲ್ಲಾ ಬಿಜೆಪಿ ಉಗ್ರ ಪ್ರತಿಭಟನೆಯನ್ನು ಮಾಡಲಿದೆ ಎಂದು ಹೇಳಿಕೆ ನೀಡಿರುವ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ಆರೆಸ್ಸೆಸ್ ಬ್ಯಾನ್ ಮಾಡುವ ಬಗ್ಗೆ ಮಾತನಾಡುತ್ತಾ ನಾವೇನೂ ಬಳೆ ತೊಟ್ಟುಕೊಂಡು ಕುಳಿತಿಲ್ಲ ಎಂದಿದ್ದಾರೆ. ಇದು ಬಿಜೆಪಿಯವರಿಗೆ ಮಹಿಳೆಯರ ಬಗ್ಗೆ ಇರುವ ಅಗೌರವವನ್ನು ಪ್ರತಿಬಿಂಬಿಸುತ್ತದೆ.ಈ ರೀತಿಯ ಹೇಳಿಕೆಗಳನ್ನು ಕೊಡುವುದರ ಮೂಲಕ ಕುಯಿಲಾಡಿಯವರು ಇಡೀ ಮಹಿಳಾ ಕುಲಕ್ಕೇ ಅವಮಾನ ಮಾಡಿದ್ದಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ವೀಣಾ ಶೆಟ್ಟಿ ಅವರು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆಗೆ ತಿರುಗೇಟು ನೀಡಿದ್ದಾರೆ.
ಬಳೆತೊಟ್ಟಿಲ್ಲ ಎಂಬುದೊಂದು ಆಡು ಭಾಷೆ ಈ ವಿಚಾರದಡಿಯಲ್ಲಿ ಜಿಲ್ಲಾಧ್ಯಕ್ಷರನ್ನು ಪ್ರಶ್ನೆ ಮಾಡುವ ನೈತಿಕತೆ ಕಾಂಗ್ರೇಸ್ಸಿಗಿಲ್ಲ ಮತ್ತು ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸನ್ನು ಧೂಳಿಪಟ ಮಾಡುವಲ್ಲಿ ಸುರೇಶ್ ನಾಯಕ್ ರ ಶ್ರಮ ಅವಿರತವಾದದ್ದು ಇದರಿಂದಾಗಿ ಉಡುಪಿಯಲ್ಲಿ ಕಾಂಗ್ರೆಸ್ ವಿಚಲಿತಗೊಂಡಿದೆ.
ಜಿಲ್ಲೆಯಲ್ಲಿ ಮಹಿಳಾಮೋರ್ಚದ ಬೆಳವಣಿಗೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರ ಕೊಡುಗೆ ಅಪಾರವಾಗಿದ್ದು ಈ ಬಗ್ಗೆ ಕಾಂಗ್ರೆಸ್ ಚಿಂತಿಸುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…