ಬಳ್ಳಾರಿ ಕಾರು ಅಪಘಾತ ಪ್ರಕರಣ : ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಕಾನೂನು ಎಲ್ಲರಿಗೂ ಒಂದೇ : ಆರ್. ಅಶೋಕ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಅಪಘಾತವಾದ ಕಾರಿಗೂ ತಮಗೂ ಯಾವುದೇ ಸಂಬಂಧವಿಲ್ಲ, ಕಾರನ್ನೂ ನನ್ನ ಮಗ ಓಡಿಸುತ್ತಿರಲಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬಳ್ಳಾರಿಯಲ್ಲಿ ಸೋಮವಾರದಂದು ನಡೆದ ಅಪಘಾತವೊಂದರಲ್ಲಿ ಪಾದಚಾರಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, “ಅಪಘಾತದಲ್ಲಿ ಇಬ್ಬರು ಅಮಾಯಕರು ಬಲಿಯಾಗಿದ್ದಾರೆ. ಘಟನೆ ನಿಜಕ್ಕೂ ಬೇಸರ ತರಿಸಿದೆ, ಆದರೆ ಅಪಘಾತವಾದ ಕಾರಿಗೂ ನಮಗೂ ಯಾವುದೇ ಸಂಬಂಧವಿಲ್ಲ, ಜೊತೆಗೆ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಂತ್ರಿಯಾಗಿ ನಾನು ಪ್ರತಿಕ್ರಿಯಿಸುತ್ತಿಲ್ಲ. ಕೆಲ ಮಾಧ್ಯಮದಲ್ಲಿ ಕೆಲವು ವಿಚಾರಗಳು ಬಂದಿವೆ. ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಸತ್ಯಾಂಶ ಹೊರಬರುತ್ತದೆ ಎಂಬ ವಿಶ್ವಾಸವಿದೆ. ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ತಪ್ಪಿಗೆ ತಕ್ಕ ಶಿಕ್ಷೆಯಾಗಲಿ ಎಂದು ಆರ್​ ಅಶೋಕ್​ ಹೇಳಿದ್ದಾರೆ.