ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಸಿಪಿಐ ಆಗಿದ್ದ ಶ್ರೀಧರ ದೊಡ್ಡಿ ಅವರಿಗೆ ಬೆಂಗಳೂರಿನ ರಾಜ ಭವನದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳ ಚಿನ್ನದ ಪದಕವನ್ನು ರಾಜ್ಯಪಾಲ ವಜುಭಾಯ್ ವಾಲಾ ಪ್ರದಾನ ಮಾಡಿದ್ದಾರೆ.
’36 ವರ್ಷ ಪ್ರಾಮಾಣಿಕ ಮತ್ತು ದಕ್ಷತೆಯಿಂದ ಕೆಲಸ ಮಾಡಿದ್ದಕ್ಕೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಇದ್ದರು
,’ ಈಗ ರಾಯಚೂರು ವಿಭಾಗದ ಗುಪ್ತಚರ ದಳದ ಡಿವೈಎಸ್ಪಿ ಆಗಿ ಪದೋನ್ನತಿ ಹೊಂದಿರುವ ಶ್ರೀಧರ್ ದೊಡ್ಡಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಬಳ್ಳಾರಿ, ಕಲಬುರಗಿ, ಶಿವಮೊಗ್ಗ, ರಾಯಚೂರು, ಮತ್ತು ಮೈಸೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಿದ್ದೇನೆ. ಈ ಮುಂಚೆ 2010 ರಲ್ಲಿ ಮುಖ್ಯಮಂತ್ರಿ ಗಳ ಚಿನ್ನದ ಪದಕ ದೊರಕಿತ್ತು. ರಾಜ್ಯದಲ್ಲಿ ಒಟ್ಟು 66 ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ,’ ಎಂದರು.
ಆದೋನಿಯವರಾದ ದೊಡ್ಡಿಯವರು 1982ರಲ್ಲಿ ಸಿರಿಗೇರಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿ ಕೆಲಸಕ್ಕೆ ಸೇರಿದ್ದರು. 2000 ರಲ್ಲಿ ಕಲಬುರಗಿ ಪಿಎಸ್‌ಐ, 2008ರಲ್ಲಿ ಸಿಪಿಐ ನಂತರ ಡಿವೈಎಸ್ಪಿ ಆಗಿ ಪದೋನ್ನತಿ ಪಡೆದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…