ಬಳ್ಳಾರಿ: ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್. ಬಿಜೆಪಿಯವರಾರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2014 ರಿಂದ ದೇಶ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಬದುಕೋಕು ಬಿಡಲ್ಲ ಸಾಯೋಕು ಬಿಡಲ್ಲ ಸತ್ತ ಮೇಲೂ ಬಿಡೋದಿಲ್ಲ ಅಷ್ಟೊಂದು ಜಿಎಸ್‍ಟಿ ಹಾಕ್ತಾರೆ. ಹಿಂದುತ್ವ ಅಜೆಂಡಾ ಭಾವನೆ ಕೆರಳಿಸುತ್ತಾ ಚುನಾವಣೆ ಮಾಡ್ತಾರೆ. 40% ಭ್ರಷ್ಟಾಚಾರ ಮಾಡಿರೋ ಸರ್ಕಾರ ಕಾಂಟ್ರಾಕ್ಟರ್ ಗಳೇ ಈ ಬಗ್ಗೆ ದೂರನ್ನು ನೀಡಿದ್ದಾರೆ. ಐಟಿ, ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಚುನಾವಣೆ ಹತ್ತಿರ ಬರುತ್ತಿದ್ದಂತೆ 40% ದಿಂದ 80% ಕ್ಕೆ ಹೋದರೂ ಅಚ್ಚರಿಯಿಲ್ಲ. ಹಿಜಬ್, ಹಲಾಲ್, ಪಠ್ಯ ಪುಸ್ತಕ ಗೊಂದಲ. ಇದೇ ಈ ಸರ್ಕಾರದ ಸಾಧನೆ. ಲಿಂಗಾಯತ ಮಠವಲ್ಲ ಎಲ್ಲಾ ಸಮುದಾಯದ ಮಠಕ್ಕೆ ಹೋಗಿದ್ದೇನೆ. ಚರ್ಚ್ ಮಸೀದಿಗೂ ಹೋಗಿದ್ದೇನೆ. ಲಿಂಗಾಯತ ಪ್ರಚಾರ ಸಮಿತಿ ಅಧ್ಯಕ್ಷನಲ್ಲ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದೇನೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆಂದು 2018ರಲ್ಲಿ ಲಿಂಗಾಯತರು ಬಿಜೆಪಿಗೆ ಮತ ಹಾಕಿದ್ರು. ಈಗ ಪರಿಸ್ಥಿತಿ ಹಾಗಿಲ್ಲ ಈಗ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸ್ತಾರೆ ಎಂದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…